LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸೋಮವಾರದ ರಾಶಿ ಭವಿಷ್ಯ - ಯಾವ ಯಾವ ರಾಶಿಯವರ ರಾಶಿ ಭವಿಷ್ಯ ಹೇಗಿದೆ ನೋಡಿ.....

ಬೆಂಗಳೂರು -

ಮೇಷ ರಾಶಿ.
ಬೆಲೆಬಾಳುವ ವಸ್ತ್ರ , ಆಭರಣಗಳನ್ನು ಖರೀದಿಸುತ್ತೀರಿ.ಆದಾಯ ಮಾರ್ಗಗಳು ಹೆಚ್ಚಾಗುತ್ತವೆ.ವೃತ್ತಿ ಮತ್ತು ಉದ್ಯೋಗ ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ ಸುತ್ತಮುತ್ತಲಿನವರೊಂದಿಗೆ ಸಣ್ಣಪುಟ್ಟ ವಿವಾದ ಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಅನಾರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.

ವೃಷಭ ರಾಶಿ
ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳ ನಡುವೆಯೂ ಪರಿಣಾಮಕಾರಿ ಯಾಗಿ ಕಾರ್ಯ ನಿರ್ವಹಿಸುತ್ತೀರಿ.ವ್ಯಾಪಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಲಾಭವನ್ನು ಪಡೆಯುತ್ತೀರಿ.ಕುಟುಂಬ ಸದಸ್ಯರೊಂದಿಗಿನ ವಿವಾದಗಳು ನಿವಾರಣೆಯಾ ಗುತ್ತವೆ.ಸಮಾಜ ಸೇವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ.ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

ಮಿಥುನ ರಾಶಿ
ಕಠಿಣ ಪರಿಶ್ರಮದಿಂದ ದೂರ ಪ್ರದೇಶದ ಪ್ರಯಾಣಗಳನ್ನು ಮಾಡುತ್ತೀರಿ.ಪ್ರತಿಯೊಂದು ಸಣ್ಣ ವ್ಯವಹಾರಕ್ಕೂ ಬಹಳ ಸಮಯ ಕಾಯ ಬೇಕಾಗುತ್ತದೆ.ಆರ್ಥಿಕ ಒತ್ತಡ ಹೆಚ್ಚಾಗುತ್ತದೆ. ವೃತ್ತಿ,ಉದ್ಯೋಗದಲ್ಲಿ ಅಧಿಕಾರಿಗಳ ಕೋಪಕ್ಕೆ ಒಳಗಾಗುತ್ತೀರಿ.ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಹೊಸ ಸಾಲಗಳನ್ನು ಮಾಡದಿರುವುದು ಉತ್ತಮ.

ಕಟಕ ರಾಶಿ.
ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ನಿವಾರಣೆ ಯಾಗುತ್ತವೆ. ಕುಟುಂಬ ಸದಸ್ಯರ ಸಹಕಾರದಿಂದ ನೀವು ಕೆಲವು ಸಮಸ್ಯೆಗಳಿಂದ ಹೊರಬರುತ್ತೀರಿ. ಶೈಕ್ಷಣಿಕ ಕಾರ್ಯಕ್ರಮಗಳಿಗೆ ಆಹ್ವಾನಗಳು ದೊರೆ ಯುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.ವೃತ್ತಿ ಪರ ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯಾಪಾರದಲ್ಲಿ ಮಿಶ್ರಮ ಫಲ ಸಿಗುತ್ತದೆ.

ಸಿಂಹ ರಾಶಿ
ದೀರ್ಘಕಾಲದ ಅನಾರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.ಕುಟುಂಬ ಸದಸ್ಯರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಬಂಧು ಮಿತ್ರ ರೊಂದಿಗಿನ ವಿವಾದಗಳು ದೂರವಾಗುತ್ತವೆ. ವೃತ್ತಿ ಉದ್ಯೋಗಗಳಲ್ಲಿ ಅಡೆತಡೆಗಳು ಎದುರಾದರೂ ಆತ್ಮಸ್ಥೈರ್ಯದಿಂದ ಕೆಲಸವನ್ನು ಪೂರ್ಣಗೊಳಿ ಸುತ್ತೀರಿ. ಕೊಳ್ಳು,ಮಾರಾಟಗಳು ಲಾಭದಾಯ ಕವಾಗಿ ಸಾಗುತ್ತವೆ.

ಕನ್ಯಾ ರಾಶಿ
ಪ್ರಮುಖ ವಿಷಯಗಳಲ್ಲಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ.ಸ್ತ್ರೀ ವಿಚಾರದಲ್ಲಿ ಜಾಗ್ರತೆ ವಹಿಸುವುದು ಉತ್ತಮ. ಸಂಗಾತಿಯ ವಿಷಯದಲ್ಲಿ ಅನಿರೀಕ್ಷಿತ ಸಮಸ್ಯೆ ಗಳು ಎದುರಾಗುತ್ತವೆ.ಕೈಗೊಂಡ ಕೆಲಸ ಸಕಾಲ ದಲ್ಲಿ ಪೂರ್ಣಗೊಳ್ಳದೆ ಮಾನಸಿಕ ಕಿರಿಕಿರಿಗಳು ಹೆಚ್ಚಾಗುತ್ತವೆ.ನಿರುದ್ಯೋಗ ಪ್ರಯತ್ನಗಳು ಕೂಡಿ ಬರುವುದಿಲ್ಲ.

ತುಲಾ ರಾಶಿ
ಜೀವನ ಸಂಗಾತಿಯ ಆರೋಗ್ಯದ ವಿಚಾರದಲ್ಲಿ ಜಾಗ್ರತೆ ವಹಿಸಬೇಕು.ಪ್ರಯಾಣದಲ್ಲಿ ರಸ್ತೆ ಅಪ ಘಾತವಾಗುವ ಸೂಚನೆಗಳಿವೆ.ಹೊಸ ಕಾರ್ಯ ಕ್ರಮಗಳನ್ನು ಪ್ರಾರಂಭಿಸಲು ಅಡೆತಡೆಗಳು ಉಂಟಾಗುತ್ತವೆ.ದೂರದಲ್ಲಿರುವ ಬಂಧುಗಳಿಂದ ಕೆಲವು ವಿಷಯಗಳು ತಿಳಿದು ಬರುತ್ತವೆ. ವೃತ್ತಿ ಮತ್ತು ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ.

ವೃಶ್ಚಿಕ ರಾಶಿ
ಮಕ್ಕಳ ವಿದ್ಯಾಭ್ಯಾಸದ ವಿಷಯಗಳು ಅನುಕೂಲಕರವಾಗಿ ಸಾಗುತ್ತವೆ. ಎಲ್ಲಾ ಕ್ಷೇತ್ರಗಳಲ್ಲಿರುವವರಿಗೂ ತಕ್ಕ ಮನ್ನಣೆ ದೊರೆಯುತ್ತದೆ.ವೃತ್ತಿಪರ ಕೆಲಸಗಳಲ್ಲಿ ಸಹೋದ್ಯೋಗಿಗಳಿಂದ ಸಹಾಯ ಮತ್ತು ಸಹಕಾರಗಳು ದೊರೆಯುತ್ತದೆ.ಬಂಧು ಮಿತ್ರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಸಿಗುತ್ತವೆ. ಆರ್ಥಿಕವಾಗಿ ಹೆಚ್ಚಿನ ಪ್ರಗತಿ ಸಾಧಿಸುತ್ತೀರಿ.

ಧನುಸ್ಸು ರಾಶಿ
ಸ್ನೇಹಿತರೊಂದಿಗೆ ಭೋಜನ, ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ.ಹಠಾತ್ ಧನ ಲಾಭ ಉಂಟಾಗುತ್ತದೆ. ಕೈಗೊಂಡ ಕೆಲಸಗ ಳಲ್ಲಿ ಬುದ್ಧಿವಂತಿಕೆಯಿಂದ ಎಲ್ಲರನ್ನೂ ನಿಮ್ಮ ಮಾತಿನ ಮೇಲೆ ನಿಲ್ಲುವಂತೆ ಮಾಡುತ್ತೀರಿ. ಮಾನಸಿಕವಾಗಿ ಹೆಚ್ಚು ಉತ್ಸುಕರಾಗಿರುತ್ತೀರಿ. ವ್ಯಾಪಾರದಲ್ಲಿ ಸಿಕ್ಕ ಅವಕಾಶಗಳನ್ನು ಸದು ಪಯೋಗಪಡಿಸಿಕೊಳ್ಳಬೇಕು.

ಮಕರ ರಾಶಿ
ಮಿತ್ರರೊಂದಿಗಿನ ವಿವಾದಗಳನ್ನು ಪರಿಹರಿಸಿ ಕೊಳ್ಳುತ್ತೀರಿ.ಕೌಟುಂಬಿಕ ವಾತಾವರಣ ಶಾಂತಿ ಯುತವಾಗಿರುತ್ತದೆ.ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಕೂಡಿ ಬರುತ್ತವೆ. ವೃತ್ತಿ ವ್ಯವಹಾರ ದಲ್ಲಿ ನಷ್ಟವನ್ನು ನಿವಾರಿಸುತ್ತೀರಿ.ಆರೋಗ್ಯದ ಕಡೆ ಹೆಚ್ಚಿನ ಗಮನವಿರಲಿ.ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಕುಂಭ ರಾಶಿ
ಮನೆಯಲ್ಲಿ ಅಧ್ಯಾತ್ಮಿಕ ಸೇವಾ ಕಾರ್ಯಕ್ರಮ ಗಳನ್ನು ನಿರ್ವಹಿಸುತ್ತೀರಿ.ಮಿತ್ರರಿಗೆ ಆರ್ಥಿಕ ನೆರವು ನೀಡುತ್ತೀರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ.ದೈಹಿಕವಾಗಿ ಮತ್ತು ಮಾನಸಿಕವಾಗಿ ಉತ್ಸಾಹದಯಕ ವಾತಾ ವರಣ ಇರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಯೋಜನೆಗಳನ್ನು ಜಾರಿಗೊಳಿಸಿ, ಲಾಭ ವನ್ನು ಪಡೆಯುತ್ತೀರಿ.

ಮೀನ ರಾಶಿ
ನಿರೀಕ್ಷೆಯಂತೆ ಯೋಜಿತ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ.ವೌಲ್ಯದ ವಸ್ತು ಮತ್ತು ವಾಹನ ಸೌಕರ್ಯಗಳು ದೊರೆಯುತ್ತವೆ. ಬೆಲೆ ಬಾಳುವ ವಸ್ತುಗಳಿಗೆ ಹಣ ವ್ಯಯವಾಗುತ್ತದೆ. ಕೊಳ್ಳು ,ಮಾರಾಟದಲ್ಲಿ ಲಾಭ ದೊರೆಯುತ್ತದೆ. ವ್ಯಾಪಾರ ವಹಿವಾಟಿನ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು.ಉದ್ಯೋಗ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ಬದಲಾಯಿಸಬೇಕು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...