LIVE TV LocalCrimeNationalInternationalPoliticsEducationTechnologyEntertainmentSportsFeature
State News

OPS ಮರು ಜಾರಿಗೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಷಡಾಕ್ಷರಿಯವರು - ರಾಜ್ಯದ ನೌಕರರಿಗಾಗಿ ಸಿಡಿದೆದ್ದ ರಾಜ್ಯಾಧ್ಯಕ್ಷರು.....

ಶಿವಮೊಗ್ಗ -

ಕರ್ನಾಟಕದಲ್ಲಿ ಹಳೆ ಪಿಂಚಣಿ ಜಾರಿ ಆಗಬೇಕು ಎಂಬುದು ಸರ್ಕಾರಿ ನೌಕಕರರ ಬಹು ದಿನಗಳ ಬೇಡಿಕೆಯಾಗಿದ್ದು ರಾಜ್ಯ ಸರಕಾರಿ ನೌಕರರ ಸಂಘವು ಎನ್‌ಪಿಎಸ್‌ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸಲು ಒತ್ತಾಯಿಸಿದೆ. ಸರ್ಕಾರಿ ನೌಕರರ ಆರ್ಥಿಕ ಭದ್ರತೆಗಾಗಿ ಈ ಕ್ರಮ ಅಗತ್ಯ ಎಂದು ಸರ್ಕಾರಿ ನೌಕರರು ಮನವಿ ಮಾಡಿದ್ದು, ಸಮಿತಿಯು ಶೀಘ್ರದಲ್ಲೇ ವರದಿ ಸಲ್ಲಿಸುವ ಭರವಸೆ ನೀಡಿದೆ.ಅಲ್ಲದೇ ಸರ್ಕಾರ ಕೊಟ್ಟ ಭರವಸೆಯನ್ನ ಈಡೇಸದಿದ್ದಾರೆ ಹೋರಾಟ ಮಾಡುವುದಾಗಿ ಸರ್ಕಾರಿ ನೌಕರರು ಎಚ್ಚರಿಕೆ ಕೊಟ್ಟಿದ್ದಾರೆ.

ಆರ್ಥಿಕ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ 2004ರಲ್ಲಿ ಕೇಂದ್ರ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದೇಶದಾದ್ಯಂತ ಅನ್ವಯಿ ಸಿತು. ಅಂದಿನಿಂದಲೂ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆಯ ಮರು ಜಾರಿಗೆ ಒತ್ತಾಯಿಸುತ್ತಲೇ ಬಂದಿದ್ದಾರೆ. ಕರ್ನಾಟದಲ್ಲಿ ಸರ್ಕಾರಿ ನೌಕರರ ಬೇಡಿಕೆಗೆ ಮಣಿದಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹಳೆ ಪಿಂಚಣಿ ಜಾರಿ ಕುರಿತು ಭರವಸೆ ನೀಡಿದ್ದು ಇದೀಗ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಪಟ್ಟು ಹಿಡಿದಿದ್ದಾರೆ.

ಇನ್ನೂ ಹಳೆ ಪಿಂಚಣಿ ಯೋಜನೆ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಾಡಕ್ಷರಿ ಅವರು ಮಾತನಾಡಿ, ಎನ್ ಪಿ ಎಸ್ ರದ್ದುಗೊಳಿಸಬೇಕು. ಓಪಿಎಸ್ ಜಾರಿಗೊಳಿಸಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದೆ. ಸರ್ಕಾರ ಈ ನಿಟ್ಟಿನಲ್ಲಿಯೂ ಕ್ರಮವಹಿಸಿದೆ. ಒಂದು ವೇಳೆ ಜಾರಿಗೊಳಿಸದೇ ಹೋದರೇ ಓಪಿಎಸ್ ಜಾರಿಗೆ, ಕೇಂದ್ರದ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ವೇತನ ನೀಡು ವುದಕ್ಕೆ ಹೋರಾಟ ರೂಪಿಸಲಿದೆ ಎಂಬುದಾಗಿ ಸಿ.ಎಸ್ ಷಡಕ್ಷರಿ ಹೇಳಿದರು.

ರಾಜ್ಯದಲ್ಲಿ 2.90 ಲಕ್ಷ ಎನ್ ಪಿ ಎಸ್ ನೌಕರರು ಇದ್ದಾರೆ. ಈಗಾಗಲೇ ವಿವಿಧ ಹಂತಗಳಲ್ಲಿ ಸರ್ಕಾರಿ ನೌಕರರ ಸಂಘದ ಪ್ರಯತ್ನದಿಂದಾಗಿ ಎನ್ ಪಿಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಯಾಗಲಿದೆ. ಇಂತಹ ಹತ್ತಾರು ಬದಲಾವಣೆಯನ್ನು ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಮಾಡಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ನೌಕರರಿಗೆ ನೀಡುವಂತ ವೇತನ ಮಾದರಿಯಲ್ಲೇ ವೇತನ ಕ್ರಮ ಜಾರಿಯಾಗಬೇಕಿದೆ. ಈಗಾಗಲೇ ಈ ಸಂಬಂಧ ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದಿದ್ದೇವೆ. ದೇಶದ 22 ರಾಜ್ಯಗಳು ಸೆಂಟ್ರಲ್ ಪೇ ಯೋಜನೆ ಜಾರಿಗೆ ತಂದಿರುವುದನ್ನು ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಯೋಜನೆ ಜಾರಿಯಾಗಿದ್ದು 1.72 ಲಕ್ಷ ಮಹಿಳಾ ನೌಕರರು ಇದರ ಪ್ರಯೋಜನ ಪಡೆಯಲಿದ್ದಾರೆ. ಮಹಿಳಾ ನೌಕರರ ತಂದೆ-ತಾಯಿಗಳಿಗೆ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯಡಿ 450ಕ್ಕೂ ಹೆಚ್ಚು ವಯೋವೃದ್ಧರು ಉಚಿತವಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸರ್ಕಾರಿ ನೌಕರರು ಅಪಘಾತದಲ್ಲಿ ಮೃತಪಟ್ಟರೇ ಅಂತವರ ಕುಟುಂಬಕ್ಕೆ 2 ಕೋಟಿ ಪರಿಹಾರ ನೀಡುವ ಯೋಜನೆ ಜಾರಿಯಾಗಿದೆ ಎಂದು ಮಾಹಿತಿ ನೀಡಿದರು.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...