LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕ್ಷೇತ್ರದಲ್ಲಿ ಅಖಾಡಕ್ಕಿಳಿದ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ – ಕ್ಷೇತ್ರದಿಂದ ಪತಿ ದೂರವಿದ್ದರೂ ಸ್ಥಾನವನ್ನು ತುಂಬಿ ಪಕ್ಷದ ಪರ ಕೆಲಸ ಮಾಡುತ್ತಾ ಸಮಸ್ಯೆ ಆಲಿಸುತ್ತಿರುವ ಶಿವಲೀಲಾ ಕುಲಕರ್ಣಿ......

ಧಾರವಾಡ -

ಕ್ಷೇತ್ರದಲ್ಲಿ ಅಖಾಡಕ್ಕಿಳಿದ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ  ಕ್ಷೇತ್ರ ದಿಂದ ಪತಿ ದೂರವಿದ್ದರೂ ಸ್ಥಾನವನ್ನು ತುಂಬಿ ಪಕ್ಷದ ಪರ ಕೆಲಸ ಮಾಡುತ್ತಾ ಸಮಸ್ಯೆ ಆಲಿಸು ತ್ತಿರುವ ಶಿವಲೀಲಾ ಕುಲಕರ್ಣಿ.

ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಇತ್ತ ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷದವರು ನಾ ಮುಂದು ನೀ ಮುಂದು ಎಂಬಂತೆ ಕಾಲಿಗೆ ಚಕ್ರ ವನ್ನು ಕಟ್ಟಿಕೊಂಡು ಓಡಾಡುತ್ತಿದ್ದಾರೆ.ಇನ್ನೂ ಇತ್ತ ಕೆಲವೆಡೆ ಅಭ್ಯರ್ಥಿಗಳು ಕೂಡಾ ಬಿಡುವಿಲ್ಲದೇ ಸುತ್ತಾಡುತ್ತಿದ್ದು ಧಾರವಾಡದ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಕ್ಷೇತ್ರದಿಂದ ಸಧ್ಯ ದೂರವಿ ದ್ದರೂ ಕೂಡಾ ಇವರ ಪತ್ನಿ ಶ್ರೀಮತಿ ಶಿವಲೀಲಾ ಕುಲಕರ್ಣಿ ಅವರು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ.

ಬಿಡುವಿಲ್ಲದೇ ಕ್ಷೇತ್ರದಲ್ಲಿ ಸುತ್ತಾಡುತ್ತಾ ಪಕ್ಷದ ಪರವಾಗಿ ಹಾಗೇ ಪತಿಯ ಪರವಾಗಿ ಒಂದಿಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತಾ ಕೆಲಸ ಕಾರ್ಯಗಳನ್ನು ಇವರು ಮಾಡುತ್ತಿದ್ದಾರೆ. ಇದ ರೊಂದಿಗೆ ಕ್ಷೇತ್ರದಲ್ಲಿ ಪತಿಯ ಸ್ಥಾನವನ್ನು ಶ್ರೀಮತಿ ಶಿವಲೀಲಾ ಕುಲಕರ್ಣಿ ತುಂಬಿದ್ದು ಕ್ಷೇತ್ರದಿಂದ ಪತಿ ದೂರವಿದ್ದರೂ ಕೂಡಾ ಅವರ ಸ್ಥಾನವನ್ನು ಪಕ್ಷದ ಕಾರ್ಯಕರ್ತರು ಮುಖಂಡರು ಆಪ್ತರನ್ನು ಬೆನ್ನಿಗೆ ಕಟ್ಟಿಕೊಂಡು ಓಡಾಡುತ್ತಾ ತುಂಬಿದ್ದಾರೆ.

ಇನ್ನೂ ಕ್ಷೇತ್ರದ ಧಾರವಾಡ ತಾಲೂಕ ಬೋಗುರು ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷ ಘೋಷಣೆ ಮಾಡಿ ರುವ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಗ್ಯಾರಂಟಿ ಬಗ್ಗೆ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಯವರು ಸಂಚಾರವನ್ನು ಮಾಡಿ ಇವುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು.

ಹಲವಾರು ಗ್ರಾಮಗಳಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಆಪ್ತರೊಂದಿಗೆ ಶ್ರೀಮತಿ ಶಿವ ಲೀಲಾ ವಿನಯ ಕುಲಕರ್ಣಿ ಅವರು ತಿರುಗಾ ಡುತ್ತಾ ತಿಳುವಳಿಕೆಯನ್ನು ಮೂಡಿಸಿದರು. ಇವ ರೊಂದಿಗೆ ಈ ಸಂದರ್ಭದಲ್ಲಿ ಗ್ರಾಮದ ಮಹಿಳೆ ಯರು ಮತ್ತು ಹಿರಿಯರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಈ ಮೂಲಕ ಇವರು ಪಕ್ಷದ ಮತ್ತು ಪತಿಯ ಪರವಗಿ ಕೆಲಸ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......