ಮಸ್ಕಿ -
ಕಾಂಗ್ರೆಸ್ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ತಿಂಗಳಲ್ಲಿ ಆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳಿದರು. ಮಸ್ಕಿ ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದೆ, ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ.

ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್‌ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿಯೇ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
https://youtu.be/QNByFBu5FJg
ಉಪಚುನಾವಣೆಯಲ್ಲಿ ಬಿಜೆಪಿ ಪಂಚಜನ್ಯ ಕಹಳೆ ಮೊಳಗಿಸಿದ್ದು, ಉಪಕದನದಲ್ಲಿ ಸಿಎಂ ಯಡಿಯೂರಪ್ಪ ಅವರು ಕೃಷ್ಣರಂತೆ ಸಾರಥಿ ಯಾಗಿದ್ದಾರೆ, ಬಿ.ವೈ.ವಿಜಯೇಂದ್ರ ಅವರು ಅರ್ಜುನರಾಗಿದ್ದಾರೆ.

ಶ್ರೀರಾಮುಲು ಭೀಮರಾಗಿದ್ದು, ಎನ್.ರವಿಕುಮಾರ ಅವರು ಸಹದೇವರಾಗಿದ್ದಾರೆ. ಈ ಕುರುಕ್ಷೇತ್ರದಲ್ಲಿ ಪಾಂಡವರಿಗೆ ಗೆಲವು ಖಚಿತವಾಗಿ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇವೆಲ್ಲದರ ನಡುವೆ ಇತ್ತ ಸಿದ್ದರಾಮಯ್ಯ ಈ ಒಂದು ವಿಚಾರ ಕುರಿತು ಏನು ಹೇಳ್ತಾರೆ ಎಂಬುದನ್ನು ಕಾದು ನೋಡಬೇಕು