LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಅನುದಾನಿತ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ - ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಗಳಿಕೆ ರಜೆ ಮಂಜೂರು ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ.....

ಬೆಂಗಳೂರು -

ಹೌದು ರಾಜ್ಯದ ಅನುದಾನಿತ ಪ್ರೌಢ ಶಾಲಾ ಶಿಕ್ಷಕ'ರಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ವೊಂದನ್ನು ನೀಡಿದ್ದು ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಗಳಿಕೆ ರಜೆ ಮಂಜೂರು ಮಾಡಿ ಆದೇಶವನ್ನು ಮಾಡಿದೆ

ಅನುದಾನಿತ ಪ್ರೌಢ ಶಾಲಾ ಶಿಕ್ಷಕರು, ಸಿಬ್ಬಂದಿ ಯವರು ರಜಾ ಅವಧಿಯಲ್ಲಿ ಕೋವಿಡ್ 19 ಕಾರ್ಯಕ್ರಮದ ಕಾರಣ ಸಮೀಕ್ಷೆ, ನಿರ್ವಹಣೆ ಕರ್ತವ್ಯ ನಿರ್ವಹಿಸಿರುವವರಿಗೆ ಗಳಿಕೆ ರಜೆ ಮಂಜೂರು ಮಾಡಿ, ಶಿಕ್ಷಣ ಇಲಾಖೆ ಆದೇಶಿಸಿದೆ

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು ಅನುದಾ ನಿತ ಪ್ರೌಢಶಾಲಾ ಸಿಬ್ಬಂದಿಯವರು ರಜಾ ಅವಧಿ ಯಲ್ಲಿ ಕೋವಿಡ್-19 ಕಾರ್ಯದಲ್ಲಿ ಸಮೀಕ್ಷೆ, ನಿರ್ವಹಣೆ ಕರ್ತವ್ಯ ನಿರ್ವಹಿಸಿರುವ ಅವಧಿಗೆ ಗಳಿಕೆ ರಜೆ ನೀಡುವ ಕುರಿತು ಮಾರ್ಗದರ್ಶನ, ನಿರ್ದೇಶ ನೀಡಲು ಸರ್ಕಾರಕ್ಕೆ ಪ್ರಸ್ತಾಪನೆಯನ್ನು ಸಲ್ಲಿಸಲಾಗಿತ್ತು

ರಾಜ್ಯ ಸರ್ಕಾರವು ಅನುದಾನಿತ ಪ್ರೌಢ ಶಾಲಾ ಸಿಬ್ಬಂದಿಯವರು ರಜೆ ಅವಧಿಯಲ್ಲಿ ಕೋವಿಡ್ ಕಾರ್ಯಕ್ರಮದಲ್ಲಿ ಸಮೀಕ್ಷೆ ಮಾಡಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಖಚಿತಪಡಿಸಿಕೊಂಡು, ಹೆಚ್ಚುವರಿ ಗಳಿಕೆ ರಜೆ ಜಮೆಗೆ ಅರ್ಹರಾಗುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಗಳಿಕೆ ರಜೆ  ಮಂಜೂರು ಮಾಡಲು ಕ್ರಮವಹಿಸುವಂತೆ ನಿರ್ದೇಶಿಲಾಗಿದೆ.

ಈ ಹಿನ್ನಲೆಯಲ್ಲಿ ಅನುದಾನಿತ ಪ್ರೌಢ ಶಾಲಾ ಶಿಕ್ಷಕರು ಸಿಬ್ಬಂದಿಗಳು ವಾಸ್ತವದಲ್ಲಿ ಬಿಡುವಿನ ವೇಳೆಯಲ್ಲಿ ಇಂತಹ ಕರ್ತವ್ಯಕ್ಕೆ ಸಕ್ಷಮ ಪ್ರಾಧಿಕಾ ರದಿಂದ ನಿಯೋಜನೆಗೊಂಡಿರುವ ಬಗ್ಗೆ ಹಾಗೂ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಪ್ರಮಾಣ ಪತ್ರ ಪಡೆದಿರುವವರು

ಆಡಳಿತ ಮಂಡಳಿಗೆ ಸಲ್ಲಿಸಿ,ಆಡಳಿತ ಮಂಡಳಿ ಯು ರಜಾ ಮಂಜೂರಾತಿ ಮಾಡುವ ಬಗ್ಗೆ ಠರಾವು ಪಾಸು ಮಾಡಿ,ಸಲ್ಲಿಸಿದಲ್ಲಿ,ಅಂತಹ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀ ಲಿಸಿ,ಗಳಿಕೆ ರಜೆಯನ್ನು ಮಂಜೂರು ಮಾಡಿ, ಸೇವಾ ಪುಸ್ತಕದಲ್ಲಿ ದಾಖಲಸಲು ಸಂಬಂಧಿಸಿದ ಆಡಳಿತ ಮಂಡಳಿಗೆ ಅನುಮತಿ ನೀಡಲು ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......