ಉಡುಪಿ -
ಶಿಕ್ಷಕರಿಗೆ ಬಡ್ತಿ ನೀಡುವ ವಿಚಾರದಲ್ಲಿ ಅನ್ಯಾಯ ಮಾಡಿದ ಮತ್ತು ಇಲಾಖೆಯ ಮೇಲಾಧಿಕಾರಿಗಳ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಅಮಾನತು ಗೊಂಡಿ ರುವ ಉಡುಪಿ ಕ್ಷೇತ್ರಶಿಕ್ಷಣಾಧಿಕಾರಿ ಯಲ್ಲಮ್ಮ ಅವರಿಗೆ ಹುದ್ದೇ ನೀಡಲಾಗಿದೆ ಹೌದು ಅಮಾನತು ಗೊಂಡು ಒಂದೇ ಒಂದು ವಾರದಲ್ಲಿ ಅವರಿಗೆ ಬೇರೆ ಕಡೆ ಯಲ್ಲಿ ಪೊಸ್ಟ್ ತೋರಿಸಿ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ
74 ಶಿಕ್ಷಕರು ಅರ್ಹತೆ ಹೊಂದಿದ್ದರು ಈ ಪೈಕಿ 70 ಶಿಕ್ಷಕರ ಪೂರ್ಣ ಪ್ರಸ್ತಾವನೆಯನ್ನು ಇಲಾಖೆಗೆ ಸಲ್ಲಿಸಲಾಗಿತ್ತು. ಆದರೆ, ಉಳಿದ 4 ಶಿಕ್ಷಕರ ಪ್ರಸ್ತಾವನೆಗಳನ್ನು ಸಲ್ಲಿಸುವಲ್ಲಿ ಶ್ರೀಮತಿ ಯಲ್ಲಮ್ಮ ಅವರು ಅನಗತ್ಯ ವಿಳಂಬ ಧೋರಣೆ ಅನುಸರಿಸಿ ದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅರ್ಹ ಶಿಕ್ಷಕರ ಕಾರ್ಯನಿರ್ವಹಣಾ ವರದಿ ಹಾಗೂ ಅಗತ್ಯ ದಾಖಲೆಗಳಿಗೆ ಸಹಿ ಮತ್ತು ಮೊಹರು ಮಾಡಿ ಕಳುಹಿಸಿಕೊಡುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚಿಸಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ಉದ್ದೇಶಪೂರ್ವಕ ವಿಳಂಬ ಕಂಡು ಬಂದಿದೆ.ಕರ್ತವ್ಯ ಲೋಪ ಎಂದು ಸಾಬೀತಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಪ್ರಸ್ತಾವನೆ ಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರ, ಶಿಸ್ತು ಕ್ರಮ ಬಾಕಿ ಇರಿಸಿ ಶ್ರೀಮತಿ ಯಲ್ಲಮ್ಮ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿತ್ತು 
ಅಮಾನತ್ತಿನ ಅವಧಿಯಲ್ಲಿ ಸದರಿ ಅಧಿಕಾರಿಯ ಲೀನ್ ಸ್ಥಾನವನ್ನು ಉಡುಪಿ ಜಿಲ್ಲೆಯ ಡಯಟ್‌ನ ಹಿರಿಯ ಉಪನ್ಯಾಸಕರು ಹುದ್ದೆಗೆ ವರ್ಗಾಯಿಸ ಲಾಗಿದೆ ಅಷ್ಟೇ ಅಲ್ಲದೆ, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗಬಾರದು ಎಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.ಈ ಆದೇಶ ವನ್ನು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಗಳು (ಸೇವೆಗಳು-2) ಹೊರಡಿಸಿದ್ದಾರೆ.
ಈ ಪ್ರತಿಯನ್ನು ಬೆಂಗಳೂರಿನ ಮಹಾಲೇಖಪಾಲರು, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಸೇರಿದಂತೆ ಸಂಬಂಧಪಟ್ಟ ವಿವಿಧ ಇಲಾಖಾ ಮುಖ್ಯಸ್ಥರಿಗೆ ಮಾಹಿತಿ ಮತ್ತು ಮುಂದಿನ ಸೂಕ್ತ ಕ್ರಮಕ್ಕಾಗಿ ರವಾನಿಸಲಾಗಿದೆ.