LIVE TV LocalCrimeNationalInternationalPoliticsEducationTechnologyEntertainmentSportsFeature
State News

ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ.....ಸುಳಿವು ನೀಡಿದ ಸಚಿವರು.....

ಆನೇಕಲ್ -

ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಚಿಂತನೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಒಂದು ಕುರಿತು ಮನವಿ ಬಂದಿದ್ದು ಪರಿಶೀಲನೆ ಮಾಡಲಾಗುತ್ತಿದೆ ಎಂದರು

ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿ ರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಯಿತು. ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿ ಸಿದಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ನೇತೃತ್ವದ ಸಮಿತಿ ಮಧ್ಯಂತರ ವರದಿ ನೀಡಿದ್ದು, ಈ ವರದಿಯಲ್ಲಿನ ಶಿಫಾರಸುಗಳ ಕುರಿತು ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಭರವಸೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿಗೌಡ,  ಶಾಸಕರಾದ ಬಿ. ಶಿವಣ್ಣ, ಕಾಮ್ಸ್ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆಯ ಡಿಡಿಪಿಐ  ಜಯಪ್ರಕಾಶ್  ಹಾಗೂ ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಆನೇಕಲ್......

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಮಯ ಬದಲಾವಣೆ..... ಮಾಹಿತಿ ನೀಡಿದ ಶಿಕ್ಷಣ ಸಚಿವರು.....ರಾಷ್ಟ್ರ ಮಟ್ಟದ ಉತ್ತಮ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಸ್ತಿಗೆ ಭಾಜನರದ BEO ಗೆ ಅಭಿನಂದಿಸಿದ KSPSTA.....NPS ಮತ್ತು OPS ನಡುವಿನ ವ್ಯತ್ಯಾಸವೇನು.....ನಿಮಗಾಗಿ ಒಂದಿಷ್ಟು ಮಾಹಿತಿ.....ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ.....ಸುಳಿವು ನೀಡಿದ ಸಚಿವರು.....ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ತಲೆಬಿಸಿ ಹೆಚ್ವಿಸಿದ ಶನಿವಾರದ ಫುಲ್‌ಡೇ ಕ್ಲಾಸ್.....ಮಕ್ಕಳಿಗೆ ಹೊರೆ, ಶಿಕ್ಷಕರಿಗೆ ತಲೆಬಿಸಿ.....ಒಂದೇ ದಿನ ಇಬ್ಬರು ಸರ್ಕಾರಿ ಅಧಿಕಾರಿಗಳು ಹೃದಯಾಘಾತದಿಂದ ಸಾವು.....ಹೆಚ್ಚಾಗುತ್ತಿದೆ ಹೃದಯಾಘಾತದ ಸಂಖ್ಯೆ.....ಶಿಕ್ಷಕರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ.....3K ತೆಗೆದುಕೊಳ್ಳುವಾಗ ಲಾಕ್.....15 ಜಿಲ್ಲೆಗಳ ಡಿಡಿಪಿಐ, ಬಿಇಒಗಳ ವಿರುದ್ಧ ದೂರು ದಾಖಲು.....ತನಿಖೆ ಶುರು.....ಶನಿವಾರ ಪೂರ್ಣ ತರಗತಿ ನಡೆಸಲು ಆದೇಶ.....ಆದೇಶ ಮಾಡಿದ DDPI.....