LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಆದೇಶ‌‌‌‌.....

ಬೆಂಗಳೂರು -

ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಜುಲೈ 1, 2026 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರವನ್ನು ಪ್ರಸ್ತುತ ಮೂಲವೇತನದ ಶೇ 15.75 ರಿಂದ ಶೇ 18ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರನಿರ್ಧಾರ ಮಾಡಿದೆnews_1793891570_0_490.webp

 

news_1793891570_1_102.webp

 

news_1793891571_2_811.webp

 

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನವೂ ಇದರಲ್ಲಿ ಒಳಗೊಳ್ಳುತ್ತದೆ

ವೇತನ ಶ್ರೇಣಿಯ ಗರಿಷಕ್ಕಿಂತ ಹೆಚ್ಚಾಗಿ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವು ದಾದರೂ ಇದ್ದಲ್ಲಿ, ಅವುಗಳು ಇದರಲ್ಲಿ ಸೇರುತ್ತವೆ. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸ ಲಾಗಿದೆ

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಜುಲೈ 1, 2026 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇ.15.75 ರಿಂದ ಶೇ.18 ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ.

ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ನಿವೃತ್ತರಾದ ನೌಕರರು ರಾಜ್ಯ ಪಿಂಚಣಿದಾರರಾಗುವುದರಿಂದ ಅವರಿಗೂ ಸಹ ಈ ಆದೇಶ ಅನ್ವಯ

ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾ ವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿ ಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾ ರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
₹1 ಲಕ್ಷ ಸಂಬಳ ಕೊಟ್ರೂ 5 ದಿನ ಶಾಲೆಗೆ ಬರೊಲ್ಲ ಸರ್ಕಾರಿ ಶಾಲಾ ಶಿಕ್ಷಕರ ಬಗ್ಗೆ ಸಿಎಂ ಪುತ್ರಿ ವಿವಾದಾತ್ಮಕ ಹೇಳಿಕೆ.....ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಆದೇಶ‌‌‌‌.....ನವೆಂಬರ್ 18 ರಿಂದ ಶಾಲಾ-ಕಾಲೇಜು ಬಂದ್‌ಗೆ ಕರೆ.....ಬಂದ್ ಗೆ ಕರೆ ನೀಡಿದ ಹೋರಾಟ ಸಮನ್ವಯ ಸಮಿತಿ.....ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಸರ್ಕಾರಿ ನೌಕರರು.....ವೇತನಕ್ಕೆ ತಕ್ಕ ಬದ್ಧತೆ ತೋರಿಸಿ ಸರ್ಕಾರಿ ಶಿಕ್ಷಕರಿಗೆ ಸಿಎಂ ಕಿವಿಮಾತು.....ಉಚಿತ ಹೋಮ್ ಡೆಲಿವರಿ.....ಗ್ರಾಹಕರಿಗೆ Big Mishra ದೀಪಾವಳಿ ಹಬ್ಬದ ಸಿಹಿ ಕೊಡುಗೆ.....ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ.....ಕಂಬನಿ ಮಿಡಿದ ನಾಡಿನ ಶಿಕ್ಷಕ ಬಂಧುಗಳು.....ರಾಜ್ಯ ಸರ್ಕಾರಿ ನೌಕರರಿಗೆಸಂತಸವನ್ನುಂಟು ಮಾಡಿದ CM ಒಪ್ಪಿಗೆ..... ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳ ಜೋಡಣೆ..... ಆತಂಕ ತಂದಿಟ್ಟ ಸರ್ಕಾರದ ನಡೆ.....ಬಾಗಲಕೋಟೆ ಅಪರ ಜಿಲ್ಲಾಧಿಕಾರಿಯಾಗಿ ಮಂಜುನಾಥ ಡೊಂಬರ ಅಧಿಕಾರ ಸ್ವೀಕಾರ ಸಹಪಾಠಿಗಳಿಂದ ಆತ್ಮೀಯ ಸನ್ಮಾನ – ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ಸ್ನೇಹಬಳಗ.....