LIVE TV LocalCrimeNationalInternationalPoliticsEducationTechnologyEntertainmentSportsFeature
Local News

25 ರಂದು ಅಟಲ್ ಜೀ ಜನ್ಮ ದಿನದಂದು ಸುಶಾಸನ ದಿನ

ಹುಬ್ಬಳ್ಳಿ - ಮಾಜಿ ಪ್ರಧಾನಿ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಇದೇ ಡಿ.25 ರಂದು ಸುಶಾಸನ ದಿನ ಆಚರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.ಹುಬ್ಬಳ್ಳಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.

ನಗರದಲ್ಲಿಂದು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,ದೇಶದ ರಾಜಕೀಯ ಇತಿಹಾಸದಲ್ಲಿಯೇ ಸಾಕಷ್ಟು ಜನಮನ್ನಣೆ ಪಡೆದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಉತ್ತಮ ಸರ್ಕಾರ,ಉತ್ತಮ ಆಡಳಿತ ಎಂಬುವ ಸದುದ್ದೇಶದಿಂದ ಸುಶಾಸನ ದಿನವನ್ನು ರಾಜ್ಯಾದ್ಯಂತ ಆಚರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಪೂರಕವಾದ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದೆ.ಅಲ್ಲದೇ ಸಾಕಷ್ಟು ಜನಪರ ಕಾಳಜಿಯನ್ನು ಹೊಂದಿರುವ ಬಿಜೆಪಿ ಸರ್ಕಾರ ತನ್ನ ಆಡಳಿತ ಅವಧಿಯಲ್ಲಿ ಸಾಕಷ್ಟು ಯೋಜನೆಯನ್ನು ರೈತರಿಗಾಗಿ ತಂದಿದೆ ಎಂದರು.

ಎಪಿಎಂಸಿ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡದ ಅವರು,ಯಾವುದೇ ಕಾರಣಕ್ಕೂ ಎಪಿಎಂಸಿ ಬಂದ್ ಆಗುವುದಿಲ್ಲ.ರೈತರ ಹಿತವನ್ನು ಕಾಯುವ ಬಗ್ಗೆ ಬಿಜೆಪಿ ಹೊಸ ಹೊಸ ಯೋಜನೆ ರೂಪಿಸುತ್ತಿದೆ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....