LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕ ಸಾಹೇಬಗೌಡ ಅಮಾನತು – ಅಮಾನತು ಮಾಡಿ ಆದೇಶ ಮಾಡಿದ ಡಿಡಿಪಿಐ.....

ಯಾದಗಿರಿ -

ಶಿಕ್ಷಕ ಸಾಹೇಬಗೌಡ ಅಮಾನತು – ಅಮಾನತು ಮಾಡಿ ಆದೇಶ ಮಾಡಿದ ಡಿಡಿಪಿಐ ಹೌದು

SSLC ಪರೀಕ್ಷಾ ಕೇಂದ್ರ ಸಾಮೂಹಿಕ ನಕಲು ಮಾಡಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಸಾಮೂಹಿಕ ನಕಲು ಮಾಡಿ ರುವ ಪ್ರಕರಣವೊಂದು ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.

ಈ ಒಂದು ಘಟನೆಯಲ್ಲಿ ಮೇಲ್ವಿಚಾರಕರಾಗಿದ್ದ ಸಾಹೇಬಗೌಡರು ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯವನ್ನು ನಿರ್ವಹಿಸುತ್ತದ್ದರು. ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು ಮೊದಲ ದಿನವೇ ವಿದ್ಯಾರ್ಥಿಗಳು ಸಾಮೂಹಿಕ ನಕಲು ನಡೆಸಿರುವುದು ಬಯಲಾಗಿದೆ.

ಕೊಠಡಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ವಿದ್ಯಾರ್ಥಿ ಗಳ ಸಾಮೂಹಿಕ ನಕಲು ಬೆಳಕಿಗೆ ಬಂದಿದ್ದು, ಕೊಠಡಿ ಮೇಲ್ವಿಚಾರದ ಸಾಹೇಬಗೌಡ ಎಂಬವರನ್ನು ಅಮಾನತ್ತುಗೊಳಿಸ ಲಾಗಿದೆ ಸುರಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಾಹೇಬಗೌಡ ಉಕ್ಕಾಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಕೊಠಡಿಯಲ್ಲಿಯೇ ಸಾಮೂಹಿಕ ನಕಲು ಕಂಡು ಬಂದಿದೆ.

ಆದರೂ ಶಿಕ್ಷಕರು ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ.ಮಾತ್ರವಲ್ಲ, ಮುಖ್ಯ ಅಧೀ ಕ್ಷಕರ ಗಮನಕ್ಕೂ ಕೂಡಾ ತಂದಿರಲಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪರೀಕ್ಷಾ ಅವ್ಯವಹಾರ ಕಂಡು ಬಂದಲ್ಲಿ, ತಕ್ಷಣವೇ ಮುಖ್ಯ ಅಧೀಕ್ಷಕರ ಗಮನಕ್ಕೆ ತಂದು ನಿಯಮಾನುಸಾರ ಕ್ರಮಕೈಗೊಳ್ಳಲು ಮುಖ್ಯ ಅಧೀಕ್ಷಕರಿಗೆ ಅಧಿಕಾ ರವಿರುತ್ತದೆ.

ಆದರೆ ಸಾಹೇಬಗೌಡ ಉಕ್ಕಾಲಿ ಅವರು ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ.ಈ ಒಂದು ಹಿನ್ನೆಲೆಯಲ್ಲಿ ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಎಚ್‌ಟಿ ಅವರು ಅಮಾನತ್ತುಗೊಳಿಸಿದ್ದಾರೆ. ಸಕ್ಷಮ ಪ್ರಾಧಿಕಾರದ ಲಿಖಿತ ಅನುಮತಿ ಇಲ್ಲದೇ ಕೇಂದ್ರಸ್ಥಾನವನ್ನು ತೊರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ

ಸುದ್ದಿ ಸಂತೆ ನ್ಯೂಸ್ ಯಾದಗಿರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...