LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಶಿಕ್ಷಕ ಸೇರಿದಂತೆ ಮೂವರ ಅಮಾನತು.....

ಹಾವೇರಿ -

ಗ್ರಾಮ ಆಡಳಿತಾಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರದ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದ ಆರೋಪದಡಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸೇರಿ ಮತ್ತೆ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಶಿಗ್ಗಾವಿನ ಮಾಮಲೆ ದೇಸಾಯಿ ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ಪರೀಕ್ಷಾ ಕೇಂದ್ರದ ಮುಖ್ಯಸ್ಥ ಹಾಗೂ ಅದೇ ಶಾಲೆಯ ಮುಖ್ಯ ಶಿಕ್ಷಕ ರಮಾಕಾಂತ ಭಟ್, ಪರೀಕ್ಷಾ ಕೊಠಡಿ ಯ ಮೇಲ್ವಿಚಾರಕ ಹಾಗೂ ಉಪನ್ಯಾಸಕ ಬಸವರಾಜ ಸವಡಿ ಮತ್ತು ಡ್ರೆಸ್‌ಕೋಡ್ ಅಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕ ರಾಜು ದುಂಡಪ್ಪನವರ ಅಮಾನತುಗೊಂಡವರೆಂದು ತಿಳಿದುಬಂದಿದೆ.ಇದರೊಂದಿಗೆ ಪ್ರಕರಣದಲ್ಲಿ ಅಮಾನ ತುಗೊಂಡವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಆದರೆ ಪರೀಕ್ಷಾ ಕೇಂದ್ರದಲ್ಲಿ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಇನ್ನೂ ಅಮಾನತು ಕ್ರಮ ಜರುಗಿಸ ದಿರುವುದು ಚರ್ಚೆಗೆ ಗ್ರಾಸವಾಗಿದೆ.ವಿಎಒನೇಮಕಾತಿ ಪರೀಕ್ಷೆಯಲ್ಲಿ ಶಿಗ್ಗಾಂವಿಯ ಶಂಕರ ಬನ್ನೂರು ಎಂಬ ಅಭ್ಯರ್ಥಿ ಮೊಬೈಲ್ ಬಳಸಿ ಪ್ರಶ್ನೆಗಳಿಗೆ ಉತ್ತರ ಹುಡುಕಿದ ಆರೋಪ ಪ್ರಕರಣದ ಗಂಭೀರತೆ ಹೆಚ್ಚಿಸಿತ್ತು ಪರೀಕ್ಷೆಯಲ್ಲಿ 151.25 ಅಂಕ ಗಳಿಸಿದ್ದ ಅಭ್ಯರ್ಥಿಯ ಅಕ್ರಮ ಬೆಳಕಿಗೆ ಬಂದ ಬಳಿಕ ಪರೀಕ್ಷಾ ವ್ಯವಸ್ಥೆಯಲ್ಲಿನ ಭದ್ರತಾ ಲೋಪಗಳ ಬಗ್ಗೆಯೂ ಪ್ರಶ್ನೆಗಳು ಎದ್ದಿದ್ದವು ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ, ಡ್ರೆಸ್‌ಕೋಡ್, ಮೇಲ್ವಿಚಾರಣೆ ಸೇರಿದಂತೆ ಹಲವು ಹಂತಗಳಿದ್ದರೂ ಮೊಬೈಲ್ ಒಳಗೆ ಪ್ರವೇಶಿಸಿದ್ದು ಹೇಗೆ? ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿತ್ತು.

ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಜಿಲ್ಲಾ ಪೊಲೀಸ್ ಇಲಾಖೆ, ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಈಗಾಗಲೇ ಅಮಾನತುಗೊಳಿಸಿದೆ. ಇದೀಗ ಪರೀಕ್ಷಾ ಕೇಂದ್ರದ ಜವಾಬ್ದಾರಿ ನಿರ್ವಹಿಸಿದ್ದ ಮೂವರು ಸಿಬ್ಬಂದಿಯ ಮೇಲೂ ಅಮಾನತು ಕ್ರಮ ಜರುಗಿಸಲಾಗಿದೆ. ಈ ಮೂಲಕ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಸೇರಿ ಒಟ್ಟು ಏಳು ಮಂದಿ ಅಮಾನತುಗೊಂಡಂ ತಾಗಿದೆ.

ಸುದ್ದಿ ಸಂತೆ ನ್ಯೂಸ್ ಹಾವೇರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕ ನರೇಂದ್ರ ಬಂಧನ.....ಶಾಲೆಯಲ್ಲಿ ವಶಕ್ಕೆ ತೆಗೆದುಕೊಂಡ ಪೊಲೀಸರು.....ಚಿತ್ರದುರ್ಗ ದಲ್ಲಿ Big Mishra ಆರಂಭ.....ಸಂಜಯ ಮಿಶ್ರಾ ಮಾಲೀಕತ್ವದ Big Mishra ಸವಿರುಚಿ ಕೋಟೆ ನಾಡಿನಲ್ಲಿ.....ಮುಖ್ಯಶಿಕ್ಷಕ ಸೇರಿದಂತೆ ಮೂವರ ಅಮಾನತು.....ಪೊಲೀಸ್ ಆಯುಕ್ತರ ಕಾರು ಚಾಲಕ ಅಮಾನತು.....ಮಹಿಳಾ ಹೆಡ್‌ ಕಾನ್‌ಸ್ಟೆಬಲ್‌ ರೇಖಾ ನಿಧನ.....ಶಾಲೆಯಲ್ಲಿ ಗುಂಡಿನ‌ ಪೈರಿಂಗ್.....ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳು.....ಶಿಕ್ಷಣ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ.....DDPI ಅಧಿಕಾರಿಗಳ ವರ್ಗಾವಣೆ.....KPS ಕೆಪಿಎಸ್ ಶಾಲೆ ಹೆಸರಲ್ಲಿ 48 ಸಾವಿರ ಸರ್ಕಾರಿ ಶಾಲೆ ಮುಚ್ಚಲು ಪ್ಲಾನ್.....ಭುಗಿಲೆದ್ದ ಆಕ್ರೋಶ ಅಸಮಾಧಾನ.....ಹೊರನಾಡಿನಲ್ಲಿ ಅರಣ್ಯ ಭೂಮಿ ಒತ್ತುವರಿ.....ಅರಣ್ಯಕ್ಕೆ ಕಂಟಕವಾದ ಒತ್ತುವರಿ ಆರೋಪ! ಅಧಿಕಾರಿಗಳ ಮೌನಕ್ಕೆ ಗ್ರಾಮಸ್ಥರ ಆಕ್ರೋಶ.....ಮತ್ತೊಂದು ಕಾರ್ಯಕ್ಕೆ ಶಿಕ್ಷಕರ ಬಳಕೆ ಭುಗಿಲೆದ್ದ ಆಕ್ರೋಶ.....