LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪೊಲೀಸ್ ಪೇದೆಗಳಿಬ್ಬರ ಅಮಾನತು – ಲೋಕಾ ದಾಳಿ ಬಳಿಕ ಆಡಿಯೋ ವೈರಲ್

ಕಲಬುರಗಿ ಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಕಾನ್ಸ್ಟೇಬಲ್ ನ್ನು ಎಸ್ಪಿ ಅಮಾನತು ಮಾಡಲಾಗಿದೆ.ಹೌದು ಮರಳು ಸಾಗಾಣಿಕೆ ಸಂಬಂಧ 30 ಸಾವಿರ ರೂಪಾಯಿ ಲಂಚ‌ ಪಡೆಯುವಾಗ ಜೇವರ್ಗಿಯ ಕಾನ್ಸ್ಟೇಬಲ್ ಶಿವರಾಯ್ ಮತ್ತು ಸಿಪಿಐ ಜೀಪ್‌ ಚಾಲಕ ಅವ್ವಣ್ಣ ಲೋಕಾಯುಕ್ತ ಪೊಲೀಸ್ ಬಲೆ ಬಿದ್ದಿದ್ದರು.ಇದರ ಬೆನ್ನಲ್ಲೇ ಮರಳು ದಂಧೆ ಕೋರನಿಂದ ಹಣಕ್ಕೆ ಬೇಡಿಕೆ ಇಟ್ಟ ಆಡಿಯೋ‌ ವೈರಲ್ ಆಗಿದ್ದು

ಅಕ್ರಮ ಮರಳು ಸಾಗಾಟದ ಹಿಂದೆ ಪೊಲೀಸರ ಕೈವಾಡ ಇರುವುದು ಬಟಾಬಯಲಾಗಿದೆ. ಕಾನ್ಸಟೇಬಲ್ ಶಿವರಾಯ್ ಮತ್ತು ಜೀಪ್ ಚಾಲಕ ಅವ್ವಣ್ಣ ಮರಳು ದಂಧೆಕೋರರ ಜೊತೆ ಮಾತಾನಾಡಿರುವ ಆಡಿಯೋ ವೈರಲ್ ಆಗಿದೆ. ಮರಳು ಸಾಗಾಣಿಕೆ ಮಾಡಬೇಕಾದರೆ ಜೇವರ್ಗಿ ಸಿಪಿಐ ಶಿವಪ್ರಸಾದ್ ಮಟ್ಟದ್ ಅವರಿಗೆ 32 ಸಾವಿರ ರೂ ಕೊಡಬೇಕು ಅಂತಾ

ಇಬ್ಬರು ಆಡಿಯೋದಲ್ಲಿ ಬೇಡಿಕೆ ಇಟ್ಟಿದ್ದಾರೆ.

 

ನೀವು ದುಡ್ಡು ಕೊಟ್ಟು ಮರಳು ಸಾಗಿಸಬೇಕು ನಮ್ಮ ಬಳಿ ಪ್ರಿಪೇಯ್ಡ್ ಇದೆ ಯಾವಾಗಲು ಪೊಸ್ಟ್ ಪೇಯ್ಡ್ ಇರುವುದಿಲ್ಲ. ಎಲ್ಲರು ದುಡ್ಡು ಕೊಟ್ಟು ಮರಳು ಹೊಡೆಯುತ್ತಿದ್ದಾರೆ. ನೀವು ದುಡ್ಡು ಕೊಟ್ಟು ಮರಳು ಹೊಡೆದರೆ ಸಿಪಿಐ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ ದುಡ್ಡು ಕೊಟ್ಟ ನಂತರ ನಮ್ಮ ಸಾಹೇಬರು ಗಾಡಿ ಹಿಡಿಯೋದಿಲ್ಲ. ಈ ಹಿಂದೆ ಕೇಸ್ ಆದಾಗ ನಿನ್ನನ್ನು ಉಳಿಸಿಲ್ವ ನಿನಗೆ ಸಾಕಷ್ಟು ಸಹಾಯ ಮಾಡಿದ್ದೀವಿ. ಹೀಗಾಗಿ 32 ಸಾವಿರ ರೂ. ಕೊಡಬೇಕು ಎಂದು ಕಾನ್ಸ್ಟೇಬಲ್ ಇಬ್ಬರು ಮಾತನಾಡಿರುವುದು ಆಡಿಯೋದಲ್ಲಿದೆ. ಇನ್ನೂಈ ಒಂದು ಲಂಚ ಪ್ರಕರಣ ಸಂಬಂಧ ಜೇವರ್ಗಿ ಸಿಪಿಐ ಶಿವಪ್ರಸಾದ್ರನ್ನು ವಶಕ್ಕೆ ಪಡೆದಿದ್ದ ಲೋಕಾಯುಕ್ತರು ಜೇವರ್ಗಿ ತಾಲ್ಲೂಕಿನ ಅತಿಥಿ ಗೃಹದಲ್ಲಿ ತಡರಾತ್ರಿವರೆಗೂ ಮೂರು ವಿಚಾರಣೆ ನಡೆಸಿದರು. ಕೊನೆಗೆ ಮರಳು ದಂಧೆಯ ಲಂಚ ಪ್ರಕರಣದಿಂದ ಸಿಪಿಐರನ್ನು ಕೈ ಬಿಟ್ಟು, ಇಬ್ಬರು ಕಾನ್ ಸ್ಟೇಬಲ್ ನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...