ಯಾದಗಿರಿ -
ಇಬ್ಬರು ಶಿಕ್ಷಕರು ಅಮಾನತುಗೊಂಡ ಘಟನೆ ಯಾದಗಿರಿ ಯಲ್ಲಿ ನಡೆದಿದೆ.ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಯಾದಗಿರಿ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಅಮಾನತು ಮಾಡ ಲಾಗಿದೆ. ಸರ್ಕಾರಿ ನೌಕರರು ಆಗಿದ್ದರೂ ಪಥಸಂಚಲ ನದಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ.
ಯಾದಗಿರಿಯ ಹುಣಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಮತ್ತು ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅವರನ್ನು ಅಮಾನತು ಮಾಡಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ಪ್ರೀಯಾಂಕ್ ಖರ್ಗೆ ಪತ್ರ ಹಿನ್ನೆಲೆಯಲ್ಲಿ ಯಾದಗಿರಿ ಶಿಕ್ಷಣ ಇಲಾಖೆಯಿಂದ ಈ ಕ್ರಮ ತೆಗೆದು ಕೊಳ್ಳಲಾಗಿದೆ.
ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಮತ್ತು ಹುಣಸಗಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಅವರನ್ನು ಅಮಾನತು ಮಾಡಿ ಯಾದಗಿರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಎಂಟು ತಿಂಗಳ ಹಿಂದೆ ನಡೆದ ಪಥ ಸಂಚಲನದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳ ಲಾಗಿದೆ ಈ ಸಂಬಂಧ ಡಾ.ಬಿ.ಆರ್ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಅವರು ದೂರು ನೀಡಿದ್ದರು. ದೂರು ಬಂದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯೂ ಕ್ರಮ ಕೈಗೊಂಡಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲ ನದಲ್ಲಿ ಶಿಕ್ಷಕರು ಭಾಗಿಯಾಗಿರುವುದು ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021ರ ಹಲವು ನಿಯಮಗಳು ಉಲ್ಲಂಘನೆ ಆಗಬಹುದು ಎಂದು ಶಿಕ್ಷಣ ಇಲಾಖೆ ಅಭಿಪ್ರಾಯ ಪಟ್ಟಿದೆ. ಶಿಕ್ಷಕರು ಭಾಗಿ ಯಾಗಿರುವುದು ಮೇಲ್ನೋಟಕ್ಕೆ ಕರ್ತವ್ಯಲೋಪಕ್ಕೆ ಸಮಾನ ಆಗತ್ತದೆ. ಕೆಎಸ್‌ಸಿ ನಿಯಮಗಳ 3(1), 3(2), 3(3), 5(1) ಮತ್ತು 7ನೇ ನಿಯಮಗಳ ಉಲ್ಲಂಘನೆ ಆಗಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಮತ್ತು ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಅವರು 2025ರ ಅಕ್ಟೋಬರ್ 12 ರಂದು ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಯಾಗಿದ್ದರೆಂದು ಫೋಟೋಗಳು ಪತ್ರಿಕೆಯಲ್ಲಿ ಪ್ರಕಟ ವಾಗಿರುವುದು ಇಲಾಖೆಯ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಯಾದಗಿರಿ.....