ಕೊಪ್ಪಳ -
ಬೆಳ್ಳಂ ಬೆಳಿಗ್ಗೆ ಸರ್ಕಾರಿ ಶಾಲಾ ಶಿಕ್ಷಕರೊಬ್ಬರನ್ನು ಸೇವೆ ಯಿಂದ ಅಮಾನತು ಮಾಡಲಾಗಿದೆ ಹೌದು ವಿದ್ಯಾರ್ಥಿನಿ ಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳ ಗ್ರಾಮೀಣ ಶಾಲಾ ವ್ಯಾಪ್ತಿಯಲ್ಲಿನ ಶಿಕ್ಷಕ ಅಂದಾನಗೌಡನ ಮೇಲೆ ಫೋಕ್ಸೋ ಪ್ರಕರಣ ದಾಖಲಾಗಿದೆ ಅತ್ತ ದೂರು ದಾಖಲಾದ ಬೆನ್ನಲ್ಲೇ ಸಧ್ಯ ಶಿಕ್ಷಕ ನಾಪತ್ತೆ ಯಾಗಿದ್ದು ಇತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ
ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಅಂದನಗೌಡ ಎಂಬಾತನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ದೂರು ದಾಖಲಾಗಿದೆ. ಪ್ರಕರಣ ಹೊರಬೀಳುತ್ತಿದ್ದಂತೆ ಆರೋಪಿ ಶಿಕ್ಷಕನನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದು ಪೊಲೀಸರು ಬಲೆ ಬೀಸಿದ್ದಾರೆ.
ಕೊಪ್ಪಳ ಗ್ರಾಮೀಣ ಭಾಗದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಅಂದನಗೌಡ, ಶಾಲಾ ಕೊಠಡಿಯೊಳಗೆ ಬಾಲಕಿಯರನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸುತ್ತಿದ್ದ. ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು, ಅಸಭ್ಯವಾಗಿ ನಡೆದುಕೊಳ್ಳುವುದು ಮಾಡುತ್ತಿದ್ದ ಎಂದು ವಿದ್ಯಾರ್ಥಿನಿ ಯರು ದೂರಿನಲ್ಲಿ ತಿಳಿಸಿದ್ದಾರೆ
ಘಟನೆ ನಡೆದ ನಾಲ್ಕು ದಿನಗಳ ನಂತರ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಅಂದನಗೌಡ ವಿರುದ್ಧ ಅಧಿಕೃತ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತಾಧಿಕಾ ರಿಗಳು ಆರೋಪಿ ಶಿಕ್ಷಕ ಅಂದನಗೌಡನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೇಸ್ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾನೆ.
ಸುದ್ದಿ ಸಂತೆ ನ್ಯೂಸ್ ಕೊಪ್ಪಳ.....