LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಿದ್ಯಾರ್ಥಿಗಳಿಂದ ಛಡಿ ಏಟಿನಿಂದ ಬಡಿಸಿಕೊಳ್ಳತ್ತಾರೆ ಶಿಕ್ಷಕ – ವಿದ್ಯಾರ್ಥಿಗಳಿಂದ ಪೆಟ್ಟು ತಿಂದು ಪಾಠ ಹೇಳುವ ಶಿಕ್ಷಕ ಗೋಪಾಲ್ ರ ಹೊಸ ಕಲಿಕಾ ಪ್ರಯೋಗ ರಾಜ್ಯಕ್ಕೆ ಮಾದರಿ.....

ಮೈಸೂರು -

ತಪ್ಪು ಮಾಡೋ ವಿದ್ಯಾರ್ಥಿಗಳಿಂದ ಛಡಿ ಏಟಿನಿಂದ ಬಡಿಸಿಕೊಳ್ಳತ್ತಾರೆ ಶಿಕ್ಷಕ ವಿದ್ಯಾರ್ಥಿ ಗಳಿಂದ ಪೆಟ್ಟು ತಿಂದು ಪಾಠ ಹೇಳುವ ಶಿಕ್ಷಕ ಗೋಪಾಲ್ ರ ಹೊಸ ಕಲಿಕಾ ಪ್ರಯೋಗ ರಾಜ್ಯಕ್ಕೆ ಮಾದರಿ ಹೌದು

ಸಾಮಾನ್ಯವಾಗಿ ತಪ್ಪು ಮಾಡಿದ ವಿದ್ಯಾರ್ಥಿಗಳಿಗೆ ಶಿಕ್ಷೆಯನ್ನು ನೀಡಿ ಪಾಠ ಬೋಧನೆಯನ್ನು ಮಾಡೊದನ್ನು ಕೇಳಿದ್ದೇವೆ ನೋಡಿದ್ದೇವೆ ಆದರೆ ಇಲ್ಲೊಬ್ಬ ಶಿಕ್ಷಕರು ತಪ್ಪು ಮಾಡಿದ ವಿದ್ಯಾರ್ಥಿ ಗಳಿಂದಲೇ ಶಿಕ್ಷೆಯನ್ನು ತಗೆದುಕೊಂಡು ಪಾಠ ಬೋಧನೆಯನ್ನು ಮಾಡುತ್ತಿದ್ದಾರೆ ಹೌದು ಇಂತಹದೊಂದು ಹೊಸ ಪ್ರಯೋಗದ ಮೂಲಕ ರಾಜ್ಯದಲ್ಲಿಯೇ ಪಾಠ ಮಾಡುತ್ತಿದ್ದಾರೆ

ರಿಪ್ಪನ್ ಪೇಟೆಯಲ್ಲಿ ವಿದ್ಯಾರ್ಥಿಗಳನ್ನು ಶತಾಯಗತಾಯ ಕಲಿಕೆಯತ್ತ ಆಸಕ್ತಿ ತಾಳು ವಂತೆ ಮಾಡುವ ಉದ್ದೇಶದಿಂದ ಸ್ವತಃ ತಾವೇ ತಪ್ಪು ಮಾಡಿದವರಿಂದ ಛಟಿ ಏಟು ತಿನ್ನುವ ಶಿಕ್ಷಕರೊಬ್ಬರು ತಮ್ಮ ವಿಭಿನ್ನ ಮಾರ್ಗದಿಂದ ಯಶಸ್ಸನ್ನೂ ಕಂಡಿದ್ದಾರೆ.

ಸಮೀಪದ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲಂದೂರು ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್‌.ಎಸ್‌.ಗೋಪಾಲ್ ಅವರೇ ಪಾಠ ಹೇಳಿದ ಬಳಿಕ ವಿದ್ಯಾರ್ಥಿಗಳಿಂದ ಉತ್ತರ ಪಡೆಯುತ್ತಾರೆ ತಪ್ಪು ಉತ್ತರ ನೀಡಿದ ಶಿಷ್ಯರಿಂದಲೇ ಛಡಿಯಿಂದ ಏಟು ತಿನ್ನುವುದನ್ನು ರೂಢಿ ಮಾಡಿದ್ದಾರೆ.

ಶಿಕ್ಷಕರಿಗೇ ಹೊಡೆಯಬೇಕಲ್ಲಎಂಬ ಕಾರಣದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ತಾಳುತ್ತಿ ದ್ದಾರೆ. ಈ ಮಾದರಿ ಯಶಸ್ವಿಯಾಗಿದೆ ಎಂದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಕರು ಮತ್ತು ಈ ಹಿಂದೆ ಇಲ್ಲಿ ಕಲಿತು ಹೋಗಿರುವ ಹಳೆ ವಿದ್ಯಾರ್ಥಿಗಳು ಹೇಳುತ್ತಾರೆ'ಪ್ರತಿಫಲ ಸಿಗಬೇ ಕಾದರೆ ಹೊಸ ಪ್ರಯೋಗಗಳಿಗೆ ಅಣಿಯಾಗ ಲೇಬೇಕು.

ಆ ನಿಟ್ಟಿನಲ್ಲಿ ನಾನು ತಪ್ಪು ಉತ್ತರ ನೀಡಿದ ವಿದ್ಯಾರ್ಥಿಯಿಂದಲೇ ಪೆಟ್ಟು ತಿನ್ನುವ ಪರಿಪಾಠ ಬೆಳೆಸಿಕೊಂಡೆ. ಶಿಕ್ಷಕರನ್ನು ದಂಡಿಸುವುದು ಹೇಗೆ ಎಂಬ ಅಳುಕಿನಿಂದಲಾದರೂ ಅವರು ಕಲಿಕೆ ಯಲ್ಲಿ ಹೆಚ್ಚು ಆಸಕ್ತಿ ತೋರಿ ಕ್ರಿಯಾಶೀಲರಾಗಲಿ ಎಂಬ ಭಾವನೆ ನನ್ನದು.ಈ ಪ್ರಯೋಗ ಯಶಸ್ವಿ ಯಾಗಿದೆ' ಎಂದು ಶಿಕ್ಷಕ ಎಚ್‌.ಎಸ್‌. ಗೋಪಾಲ್‌ ತಿಳಿಸಿದರು.

'ಶಿಕ್ಷಕ ಎಚ್‌.ಎಸ್‌. ಗೋಪಾಲ್‌ ಅವರು ವಿದ್ಯಾರ್ಥಿಗಳನ್ನು ಬುದ್ಧಿವಂತರಾಗಿಸಲು ನಡೆಸಿರುವ ವಿನೂತನ ಪ್ರಯೋಗ ಗಾಢ ಪರಿಣಾಮ ಬೀರಿದೆ. ಕಲಿಕಾ ಸಾಮಗ್ರಿಗಳ ಮೂಲಕ ಮಕ್ಕಳಿಗೆ ಪಠ್ಯವನ್ನು ಸುಲಭವಾಗಿ ಅರ್ಥವಾಗುವಂತೆ ಹೇಳಿಕೊಡುತ್ತಿದ್ದಾರೆ.

ಪಾಠದ ಜತೆಗೆ ಸಂಸ್ಕೃತಿ, ಸಂಸ್ಕಾರವನ್ನೂ ಕಲಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ನಡವಳಿಕೆಯಲ್ಲಿ ಸಾಕಷ್ಟು ಬದಲಾವಣೆ ಕಂಡುಬಂದಿದೆ' ಎಂದು ಪಾಲಕರು ತಿಳಿಸಿದ್ದಾರೆ.
'ಶಿಕ್ಷಕ ಗೋಪಾಲ್‌ ಅನುಸರಿಸುತ್ತಿರುವ ವಿನೂತನ ಕಲಿಕಾ ಮಾದರಿಯ ಕಾರಣಕ್ಕೆ ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆ ಇನ್ನೂ ಮುಂದುವರಿದಿದೆ.

ಜೂನ್‌ನಲ್ಲಿ ಶಿಕ್ಷಕ ಗೋಪಾಲ್‌ ನಿವೃತ್ತಿಯಾಗಲಿ ದ್ದಾರೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿ ಸುವ ನಿಟ್ಟಿನಲ್ಲಿ ಎಲೆಮರೆಯ ಕಾಯಿಯಂತೆ ಕಾರ್ಯ ನಿರ್ವಹಿಸುವ ಇಂತಹ ಶಿಕ್ಷಕರನ್ನು ಸರ್ಕಾರ, ಸಂಘ- ಸಂಸ್ಥೆಗಳು ಗುರುತಿಸಿ ಗೌರವಿ ಸಿದಲ್ಲಿ ಅವರ ಸೇವಾಕಾರ್ಯಕ್ಕೆ ಸಾರ್ಥಕತೆ ಸಿಗಲಿದೆ' ಎಂಬ ಮಾತುಗಳು ಕೂಡಾ ಪೋಷಕರಿಂದ ಕೇಳಿ ಬರುತ್ತಿವೆ

ಸುದ್ದಿ ಸಂತೆ ನ್ಯೂಸ್ ರಿಪ್ಪನ್ ಪೇಟೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...