ಮಧ್ಯಪ್ರದೇಶ -
ವಿದ್ಯಾರ್ಥಿನಿ ಯೊಬ್ಬಳಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಬಂಧನ ಮಾಡಿದ ಘಟನೆ ಮಧ್ಯಪ್ರದೇಶ ದಗುಣಾ ಜಿಲ್ಲೆಯಲ್ಲಿ ನಡೆದಿದೆ ಸರ್ಕಾರಿ ಶಾಲೆಯೊಂದರಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡುವುದಾಗಿ ಬೆದರಿಕೆ ಹಾಕಿದ್ದ ಗಣಿತ ಶಿಕ್ಷಕನನ್ನು ಪೊಲೀಸರು ಬಂಧಿಸಿ ದ್ದಾರೆ ನರೇಂದ್ರ ಕುಶ್ವಾಹ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ನರೇಂದ್ರ ಕುಶ್ವಾಹ್ ವಿದ್ಯಾರ್ಥಿನಿಗೆ ನಿರಂತರವಾಗಿ ಅಸಭ್ಯ ಸಂದೇಶಗಳನ್ನು ಕಳುಹಿಸು ತ್ತಿದ್ದನು ಅಲ್ಲದೆ ತನ್ನೊಂದಿಗೆ ಹೊರಗೆ ಬರುವಂತೆ ಮತ್ತು ದೈಹಿಕ ಸಂಬಂಧ ಬೆಳೆಸುವಂತೆ ಒತ್ತಡ ಹೇರುತ್ತಿದ್ದನು ಈ ಪ್ರಸ್ತಾಪವನ್ನು ವಿದ್ಯಾರ್ಥಿನಿ ನಿರಾಕರಿಸಿದಾಗ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ನೀಡುವುದಾಗಿ ಬೆದರಿಕೆ ಹಾಕಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿ ಶಿಕ್ಷಕ ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಅಸಭ್ಯ ಸಂದೇಶಗಳನ್ನು ಕಳುಹಿಸುವುದು ಊಟಕ್ಕೆ ಹಾಗೂ ಹೊರಗೆ ಕರೆದೊಯ್ಯಲು ನಿರಂತರವಾಗಿ ಪೀಡಿಸುತ್ತಿದ್ದನು ಹಾಗೂ ಸ್ಪಷ್ಟವಾಗಿ ಲೈಂಗಿಕ ಬೇಡಿಕೆ ಇಟ್ಟಿದ್ದನು.ಶಿಕ್ಷಕನ ಕಿರುಕುಳದಿಂದ ನೊಂದ ವಿದ್ಯಾರ್ಥಿನಿ ಧೈರ್ಯ ಮಾಡಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ದೂರು ಆಧರಿಸಿ ಪೊಲೀಸರು ತಕ್ಷಣವೇ ಶಾಲಾ ಆವರಣಕ್ಕೆ ತೆರಳಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಶಿಕ್ಷಕನಂತಹ ಪವಿತ್ರ ವೃತ್ತಿಯಲ್ಲಿರುವ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯರ ಸುರಕ್ಷತೆಗೆ ಕುತ್ತು ತಂದಿರುವುದು ಮತ್ತು ಸ್ಥಾನದ ದುರ್ಬಳಕೆ ಮಾಡಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ದಿ ಸಂತೆ ನ್ಯೂಸ್ ಮಧ್ಯಪ್ರದೇಶ.....