LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಪ್ರತಿಭಟನೆ BEO ವರ್ಗಾವಣೆಗೆ ಪಟ್ಟು ಹಿಡಿದ ಶಿಕ್ಷಕರು ಮನವಿ ಸಲ್ಲಿಕೆ.....

ಬೆಂಗಳೂರು -

ಹೌದು ಶಿಕ್ಷಕರ ಮೇಲೆ ಅನಗತ್ಯ ಒತ್ತಡ ಹೇರುತ್ತಿರುವ ಕ್ಷೇತ್ರ ಶಿಕ್ಷಣ ಅಧಿಕಾರಿ (ಬಿಇಒ) ಹನುಮಂತರಾಯಪ್ಪ ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘ ಹಾಗೂ ತಾಲ್ಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಳು ಡಿಡಿಪಿಐ ಹಾಗೂ ಬಿಇಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಬಿಇಒ ಒತ್ತಡದಿಂದಲೇ ಶಿಕ್ಷಕ ಸುಬ್ಬರಾಯಪ್ಪ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ.

ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮತ್ತು ಅನವಶ್ಯಕವಾಗಿ ಒತ್ತಡ ಹೇರುವ ಬಿಇಒ ವರ್ಗಾವಣೆ ಮಾಡದಿದ್ದರೆ ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆ ಬಹಿಷ್ಕಾರ ಮಾಡಲಾಗುವುದು ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಿಕ್ಷಕರು ಎಚ್ಚರಿಕೆ ನೀಡಿದರು.ತಾಲ್ಲೂಕಿನ ಕಸಬಾ ವ್ಯಾಪ್ತಿಯ ಮಾರಿಬೀಳು ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಸುಬ್ಬರಾಯಪ್ಪ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಶಿಕ್ಷಕರ ಸಾವಿಗೆ ಬಿಇಒ ಅವರ ಒತ್ತಡವೇ ಕಾರಣವಾಗಿದೆ ಎಂದು ಶಿಕ್ಷಕರು ದೂರಿದರು.

'ಬಿಇಒ ಹನುಮಂತರಾಯಪ್ಪ ಅವರು ಶಿಕ್ಷಕರಿಗೆ ಕಿರುಕುಳ ನೀಡುವುದು ಹಾಗೂ ‌ಮಹಿಳಾ ಶಿಕ್ಷಕಿಯರಿಗೆ ಏಕವಚನದಲ್ಲಿ ನಿಂದಿಸುವ ಕೆಲಸ ‌ಮಾಡುತ್ತಿದ್ದಾರೆ. ಶಿಕ್ಷಕರಿಗೆ ಮಾನಸಿಕ ಹಿಂಸೆ ಮತ್ತು ದಬ್ಬಾಳಿಕೆ ನಡೆಸು ವುದು ಸಾಮಾನ್ಯವಾಗಿದೆ' ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಂಗಪ್ಪ ಆರೋಪ ಮಾಡಿದರು.

ಶಿಕ್ಷಕರಲ್ಲಿ ಬಿಇಒ ಅವರು ಭಯದ ವಾತಾವರಣ ಸೃಷ್ಟಿಸಿದ್ದಾರೆ. ಸಣ್ಣಪುಟ್ಟ ವಿಚಾರಗಳಿಗೂ ನೋಟಿಸ್ ನೀಡುತ್ತಿದ್ದಾರೆ. ತಕ್ಷಣ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಂಜಯ ಆಗ್ರಹಿಸಿ ದರು

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ನಟರಾಜು, ನರಸಿಂಹಮೂರ್ತಿ, ಶಿವಕುಮಾರ್, ಶಶಿಕುಮಾರ್, ರಘು, ರಾಮದಾಸು, ರಮೇಶ್, ದೇವರಾಜು, ಹನುಮಂತರಾಜು, ಲಕ್ಷ್ಮಿರಂಗಯ್ಯ, ರಂಗಧಾಮಯ್ಯ, ಸಿದ್ದೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸುದ್ದಿ ಸಂತೆ ನ್ಯೂಸ್ ಮಧುಗಿರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...