LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಪ್ರತಿಭಟನೆ - BEO ಕಚೇರಿ ಮುಂದೆ ಪ್ರತಿಭಟನೆ ಮನವಿ ಸಲ್ಲಿಕೆ.....

ದೊಡ್ಡಬಳ್ಳಾಪುರ (ಬೆಂ.ಗ್ರಾಮಾಂತರ) -

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಅವೈಜ್ಞಾನಿ ಕವಾಗಿ ಮನೆಗಳ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡಸಿದರು. ಇದರಿಂದಾಗಿ ತಾಲ್ಲೂಕಿನಲ್ಲಿ ಸಮೀಕ್ಷೆ ಆರಂಭವಾಗಲಿಲ್ಲ.ಸಮೀಕ್ಷೆಗೆ ನಿಯೋಜಿಸಲಾಗಿರುವ ಶಿಕ್ಷಕರಿಗೆ ವೈಜ್ಞಾನಿಕವಾಗಿ ಮನೆಗಳನ್ನು ಹಂಚಿಕೆ ಮಾಡಬೇಕು.

ನಿಯಮಾನುಸಾರ ಇತರ ಇಲಾಖೆಗಳ ನೌಕರರನ್ನೂ ಸಮೀಕ್ಷೆಗೆ ನಿಯೋಜಿಸಬೇಕು ಎಂದು ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಉಪವಿಭಾಗಾಧಿಕಾರಿ ಎನ್. ದುರ್ಗಾಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಶಿಕ್ಷಕರನ್ನು ಅವರಿರುವ ಸ್ಥಳದಿಂದ 3 ಕಿ.ಮೀ ವ್ಯಾಪ್ತಿ ಯಲ್ಲಿ ಸಮೀಕ್ಷೆಗೆ ನಿಯೋಜಿಸಬೇಕು. ಆದರೆ, 20 ರಿಂದ 30 ಕಿ.ಮೀ ದೂರದ ಸಾಸಲು ಆರೂಢಿಯ ಶಿಕ್ಷಕರನ್ನು ಸಮೀಕ್ಷೆಗೆ ನಿಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 48 ಇಲಾಖೆಯ ಇತರ ನೌಕರರನ್ನು ಸಹ ಸಮೀಕ್ಷೆ ಕಾರ್ಯಕ್ಕೆ ಬಳಸಿಕೊಳ್ಳ ಲಾಗಿದೆ. ಇದರಂತೆ ನಮ್ಮ ತಾಲ್ಲೂಕಿನ 24 ಇಲಾಖೆಗಳ ಸಿ.ದರ್ಜೆ ನೌಕರರನ್ನು ಸಮೀಕ್ಷೆ ಕಾರ್ಯಕ್ಕೆ ಬಳಸಿ ಕೊಳ್ಳಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್ ಒತ್ತಾಯಿಸಿದರು.

ಈ ನಡುವೆ ಗರ್ಭಿಣಿ, ಬಾಣಂತಿಯರು ಸೇರಿದಂತೆ ಆರೋಗ್ಯದ ಸಮಸ್ಯೆ ಇರುವವರಿಗೆ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಬೇಕು ಎಂದು ಮನವಿಮಾಡಿರು.ಸಮೀಕ್ಷೆ ಕಾರ್ಯದಲ್ಲಿ ಗೊಂದಲ ಗಳಾಗಿರುವುದು ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ ಭರವಸೆ ನೀಡಿದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಧನಂಜಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಜೈಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಸವಲಿಂಗಯ್ಯ, ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್.ಸಿದ್ದಗಂಗಯ್ಯ ಇದ್ದರು.

ಸುದ್ದಿ ಸಂತೆ ನ್ಯೂಸ್......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...