ಧಾರವಾಡ -
ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ಧಾರವಾಡ ದಲ್ಲಿ ನಡೆದಿದೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿ ಗೀಡಾಗಿದ್ದು ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಘಟನೆ ನಡೆದಿದೆ.ವಿನಾಯಕ (25), ಮಂಜುನಾಥ (29) ಮತ್ತು ಬಸವರಾಜ್(34) ಸಾವನ್ನಪ್ಪಿದ ದುರ್ದೈವಿಗಳಾಗಿ ದ್ದಾರೆ.ಮೃತರು ದಾವಣಗೆರೆ ಮೂಲದವರಾಗಿದ್ದು ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಧಾಬಾದಲ್ಲಿ ಊಟ ಮುಗಿಸಿ ಹೆದ್ದಾರಿ ಹತ್ತಿದ್ದ ಕಾರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಒಂದು ಘಟನೆ ನಡೆದಿದೆ ಡಿವೈಡರಗೆ ಡಿಕ್ಕಿ ಹೊಡೆದು ಪಲ್ಟಿ ಯಾಗಿದ್ದು ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಗಾಯಾಳುಗಳಾದ ಅಭಿಷೇಕ, ಅಜಯ್ ಮತ್ತು ಬಸನಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಘಾತದಲ್ಲಿ ಮೃತಪಟ್ಟ ಮೂವರ ಶವಗಳನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ ಗರಗ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ .....