LIVE TV LocalCrimeNationalInternationalPoliticsEducationTechnologyEntertainmentSportsFeature
State News

ಭೀಕರ ಅಪಘಾತ ಇಬ್ಬರು ಶಿಕ್ಷಕರು ಸಾವು - ಗಂಭೀರವಾಗಿ ಗಾಯಗೊಂಡ ಶಿಕ್ಷಕರು ಆಸ್ಪತ್ರೆಗೆ ದಾಖಲು.....

ಉಡುಪಿ -

ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಉಡುಪಿ ಬಳಿ ನಡೆದಿದೆ.ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿದ್ದಾರೆ.

ಸೀತಾನದಿ ಜಕ್ಕನಮಕ್ಕಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಗಂಭೀರವಾಗಿ ಗಾಯಗೊಂಡ ಶಿಕ್ಷಕರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.

ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿ ಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾ ಗಿರುವ ಸೋಮ ಶೇಖರ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು.ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬು ವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಉಡುಪಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...