LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾಲು ಜಾರಿ ಹೊಳೆಯಲ್ಲಿ ಬಿದ್ದ ಎರಡನೇಯ ತರಗತಿಯ ಸನ್ನಿಧಿ ಶಾಲೆಯಿಂದ ಮನೆಗೆ ಹೊರಟಿದ್ದ ಸಮಯದಲ್ಲಿ ಅವಘಡ.....

ಬೈಂದೂರು-

ಶಾಲೆಯಿಂದ ಮನೆಗೆ ಹೊರಟಿದ್ದ ಸಮಯದಲ್ಲಿ ವಿದ್ಯಾರ್ಥಿ ಯೊಬ್ಬಳು ಕಾಲು ಜಾರಿ ಬಿದ್ದು ಹೊಳೆ ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ನಡೆದಿದೆ.ಶಾಲೆ ಬಿಟ್ಟ ನಂತರ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಕಾಲು ಸಂಕದಿಂದ ಜಾರಿ ಬಿದ್ದು ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಹೊಳೆಯಲ್ಲಿ ಹೋಗಿದ್ದಾಳೆ

ಕಾಲ್ತೋಡಿನ ಬೊಳಂಬಳ್ಳಿಯ ಮಕ್ಕಿಮನೆ ಮನೆ ನಿವಾಸಿ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7)ನೀರು ಪಾಲಾದ ಬಾಲಕಿಯಾಗಿದ್ದಾಳೆ.ಶಾಲೆ ಬಿಟ್ಟ ಬಳಿಕ ಮನೆಗೆ ಬರುತ್ತಿದ್ದ ವೇಳೆಯಲ್ಲಿ‌ ಬೀಜಮಕ್ಕಿ ಎಂಬಲ್ಲಿ ಹರಿಯುವ ಹೊಳೆಗೆ ಹಾಕಲಾಗಿದ್ದ ಕಾಲು ಸಂಕದಲ್ಲಿ ಬಾಲಕಿ ಸನ್ನಿಧಿ ಮತ್ತು ಆಕೆಯ ಸ್ನೇಹಿತರು ಹೊಳೆದಾಟು ತ್ತಿದ್ದ ಸಂದರ್ಭದಲ್ಲಿ ಸನ್ನಿಧಿ ಕಾಲು ಜಾರಿ ಹೊಳೆಗೆ ಬಿದ್ದಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ.

ವಿಷಯ ತಿಳಿದು ತಕ್ಷಣ ಹುಡುಕಾಟ ಮಾಡಿದರೂ ಸನ್ನಿಧಿ ಪತ್ತೆಯಾಗಿಲ್ಲ.ಬೈಂದೂರು ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹುಡುಕಾಟ ಮಾಡಿದ್ದಾರೆ. ಬಾಲಕಿ ಮನೆಗೆ ಭೇಟಿ ಕೊಟ್ಟು ಶಾಸಕ ಸುಕುಮಾರ್ ಶೆಟ್ಟಿ ಸಾಂತ್ವಾನ ಹೇಳಿದ್ದು ಬೀಜಮಕ್ಕಿ ಪ್ರದೇಶದ ಈ ಹೊಳೆಗೆ ಸೇತುವೆ ಆಗಬೇಕೆಂದು ಜನ ಸುಮಾರು ವರ್ಷಗಳಿಂದ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜ ನವಾಗಿಲ್ಲ.ಹೊಳೆಯ ಇನ್ನೊಂದು ಭಾಗದಲ್ಲಿ ನೂರಕ್ಕೂ ಅಧಿಕ ಕುಟುಂಬಗಳು ವಾಸವಿದ್ದು ಮಳೆಗಾಲದಲ್ಲಿ ನೀರಿನ ಹರಿವು ಜಾಸ್ತಿ ಆದರೆ ಬೀಜಮಕ್ಕಿ ಪ್ರದೇಶ ದ್ವೀಪವಾಗು ತ್ತದೆ.ಶಾಶ್ವತ ಸೇತುವೆ ನಿರ್ಮಾಣಕ್ಕೆ ಜನರು ಮನವಿಗಳ ಮೇಲೆ‌ ಮನವಿ ನೀಡಿದರೂ ಯಾವುದೇ ಪ್ರಯೋಜನ ವಾಗದ ಹಿನ್ನಲೆಯಲ್ಲಿ ಜನರೇ ತಾತ್ಕಾಲಿಕ ವಾಗಿ ಕಾಲು ಸಂಕ ನಿರ್ಮಾಣ ಮಾಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...