LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಿಡಿ ಪ್ರಕರಣಕ್ಕೆ ಟ್ವಿಸ್ಟ್ - ಉಲ್ಟಾ ಹೇಳಿಕೆ ನೀಡಿದ ಆ ಸಿಡಿ ಲೇಡಿ.....

ಬೆಂಗಳೂರು -

ಕಳೆದ ಕೆಲ ದಿನಗಳಿಂದ ಶಾಂತವಾಗಿದ್ದ ಆ ಸಿಡಿ ಪ್ರಕರಣದಲ್ಲಿ ದೊಡ್ಡ ಸ್ಫೋಟಕ ತಿರುವು ಸಿಕ್ಕಿದೆ‌. ಹೌದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬ್ಲ್ಯಾಸ್ಟಿಂಗ್ ಟ್ವಿಸ್ಟ್ ಸಿಕ್ಕಿದೆ.ತನಿಖೆ ಮಾಡುತ್ತಿರುವ ಎಸ್‌ಐಟಿ ಅಧಿಕಾರಿಗಳ ಮುಂದೆ ಸಿಡಿ ಯುವತಿ ಉಲ್ಟಾ ಹೇಳಿಕೆ ನೀಡಿದ್ದಾಳೆ.ಈವರೆಗೆ ಸಿಡಿದೆದ್ದ ಸಿಡಿ ಲೇಡಿ ಈಗ ಏಕಾಎಕಿಯಾಗಿ ಈ ಒಂದು ಪ್ರಕರಣ ದಲ್ಲಿ ಉಲ್ಟಾ ಹೇಳಿಕೆ ನೀಡಿದ್ದಾರೆ.

ಹೌದು ಈ ಒಂದು ಪ್ರಕರಣದಲ್ಲಿ ನನ್ನನ್ನು ಹನಿ ಟ್ರ್ಯಾಪ್ ಗೆ ಬಳಿಸಿಕೊಂಡು ಈ ರೀತಿಯ ಕೃತ್ಯ ಎಸಗಿ ದ್ದಾರೆ. ಎನ್ನುತ್ತಾ ಪ್ರಕರಣ ದಲ್ಲಿ ತಲೆ ಮರೆಸಿಕೊಂಡಿ ರುವ ಕಿಂಗ್ ಪಿನ್ಸ್ ನರೇಶ್, ಶ್ರವಣ್ ವಿರುದ್ಧ ಸಿಡಿ ಲೇಡಿ ಸ್ಫೋಟಕ ಆರೋಪ ಮಾಡಿದ್ದಾಳೆ. ನನ್ನನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದೇ ನರೇಶ್, ಶ್ರವಣ್ ಎಂದು ಎಸ್‌ಐಟಿ ಮುಂದೆ ಇಂದು ಹಾಜರಾಗಿ ಸಿಡಿ ಯುವತಿ ಹೇಳಿದ್ದಾಳೆ.

ಈ ಸಂಬಂಧ ಎಸ್ಐಟಿ ತನಿಖಾಧಿಕಾರಿ ಕವಿತಾ ಮುಂದೆ ಇಂದು ಆ ಸಿಡಿ ಯುವತಿ ಹಾಜರಾಗಿ ಹೇಳಿಕೆ ದಾಖಲು ಮಾಡಿದ್ದಾರೆ. ಇನ್ನೂ ಇದನ್ನು ಕೂಡಾ ರೆಕಾರ್ಡ್ ಮಾಡಿಕೊಂಡಿದ್ದಾರೆ ಅಧಿಕಾರಿ ಗಳು.ರಮೇಶ್ ಜಾರಕಿಹೊಳಿ ವಿರುದ್ಧ ನನ್ನ ಹೇಳಿಕೆ ಪೂರ್ಣ ಸತ್ಯ ಅಲ್ಲ. ನಾನು ಹನಿಟ್ರ್ಯಾಪ್‌ ಆಗಿದ್ದೆ. ನರೇಶ್ ಹಾಗೂ ಶ್ರವಣ್ ನನ್ನನ್ನು ಆ ರೀತಿ ಬಳಸಿ ಕೊಂಡಿದ್ದಾರೆ ಎಂದು ಲೇಡಿ ಹೇಳಿ ಪ್ರಕರಣಕ್ಕೆ ತಿರುವು ನೀಡಿದ್ದಾರೆ ಆ ಲೇಡಿ

ನರೇಶ್ ಮತ್ತು ಶ್ರವಣ್ ಹೇಳಿದಂತೆ ನಾನು ನಡೆದು ಕೊಂಡೆ. ಈ ಹಿಂದೆ ಒತ್ತಡದಲ್ಲಿದ್ದರಿಂದ ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಕವಿತಾ ಮುಂದೆ ಯುವತಿ ನೀಡಿರುವ ಹೇಳಿಕೆಯನ್ನು ಕ್ಯಾಮೆ ರಾದಲ್ಲಿ ಎಸ್‌ಐಟಿ ದಾಖಲು ಮಾಡಿಕೊಂಡಿದ್ದಾರೆ

ಇಂದು ನಡೆದ ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಡಿ ಯುವತಿಯನ್ನು ಇದೀಗ ಮತ್ತೊಮ್ಮೆ ಜಡ್ಜ್‌ ಮುಂದೆ ಹಾಜರುಪಡಿಸಲು SIT ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯಕ್ಕೆ ಸಿಆರ್‌ಪಿಸಿ 161 ಅಡಿ SIT ಮುಂದೆ ಯುವ ತಿ ಈ ಹಿಂದೆ ಹೇಳಿಕೆ ನೀಡಿದ್ದಳು. ಇದೀಗ ಎಸ್‌ಐಟಿ ಮುಂದೆ ಬದಲಾದ ಹೇಳಿಕೆ ನೀಡಿರುವ ಸಂತ್ರಸ್ತ ಯುವತಿ ಸಿಆರ್‌ಪಿಸಿ 164 ಅಡಿಯಲ್ಲಿ ಜಡ್ಜ್ ಮುಂದೆಯೂ ಬದಲಾದ ಹೇಳಿಕೆ ನೀಡಲು ಸಿದ್ಧ ಎಂದು ತಿಳಿಸಿರುವುದಾಗಿ ತಿಳಿದುಬಂದಿದೆ. ಹಾಗಾಗಿ, ಎಸ್‌ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ಕೇಳಿದ್ದು ಇನ್ನೂ ಯಾವ ಯಾವ ಬೆಳವ ಣಿಗೆ ಆಗುತ್ತವೆ ಎಂಬುದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......