LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಶಿಕ್ಷಕ ಅಮಾನತು - ಅಮಾನತು ಮಾಡಿ ಆದೇಶ ಮಾಡಿದ ಇಲಾಖೆಯ ಆಯುಕ್ತರು.....

ಮೈಸೂರು -

ಮುಖ್ಯಶಿಕ್ಷಕ ಅಮಾನತು - ಅಮಾನತು ಮಾಡಿ ಆದೇಶ ಮಾಡಿದ ಇಲಾಖೆಯ ಆಯುಕ್ತರು

ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ಆರೋಪದ ಹಿನ್ನಲೆಯಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನಲೆ ಯಲ್ಲಿ ಎಚ್ ಡಿ ಕೋಟೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಅಮಾನತು ಮಾಡಿದ್ದಾರೆ.

ನ.20ರಂದು ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಪ್ರೌಢ ಶಾಲೆಯಿಂದ 8, 9 ಮತ್ತು 10ನೇ ತರಗತಿಗಳ 50 ಮಕ್ಕಳನ್ನು 5 ದಿನಗಳ ಪ್ರವಾಸಕ್ಕೆ ಹೋಗಿದ್ದರು ಇದರಲ್ಲಿ 20 ಬಾಲಕರು ಮತ್ತು 30 ಬಾಲಕಿಯರು ಮೂವರು ಪುರುಷ ಹಾಗೂ ಇಬ್ಬರು ಮಹಿಳಾ ಶಿಕ್ಷಕಿಯರು ಕೂಡಾ ತಂಡದಲ್ಲಿದ್ದರು.ಪ್ರವಾಸ ಮುಗಿಸಿ ಬಂದ ಮೇಲೆ ಪೋಷಕರ ಬಳಿ ಕೆಲ ವಿದ್ಯಾರ್ಥಿನಿಯರು ಬಸ್ ಹಾಗೂ ಬೀಚ್​ನಲ್ಲಿ ಮುಖ್ಯ ಶಿಕ್ಷಕ ಹಾಗೂ ಡಿ ಗ್ರೂಪ್ ನೌಕರ ಅನುಚಿ ತವಾಗಿ ವರ್ತಿಸಿದ ಬಗ್ಗೆ ಮಾಹಿತಿ ನೀಡಿದ್ದಾರೆ.ಈ ಸಂಬಂಧ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ಆಗಮಿಸಿ ಮುಖ್ಯ ಶಿಕ್ಷಕರ ವರ್ತನೆ ಖಂಡಿಸಿ ಪ್ರತಿಭಟನೆಯನ್ನು ಕೂಡಾ ನಡೆಸಿದ್ದರು.

ಬಿಇಒ ಮಾರಯ್ಯ ಅವರು ಶಾಲೆಗೆ ಭೇಟಿ ನೀಡಿ ಮಕ್ಕಳು ಹಾಗೂ ಶಿಕ್ಷಕರ ಅಭಿಪ್ರಾಯ ಪಡೆದು ಡಿಡಿಪಿಐ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ನಂತರ ಈ ಒಂದು ವರದಿ ಕೈ ಸೇರಿದ ನಂತರ ಡಿಡಿಪಿಐ ಎಚ್.ಕೆ. ಪಾಂಡು ಅವರು ಡಿ ಗ್ರೂಪ್ ನೌಕರನನ್ನು ಅಮಾನತುಗೊಳಿಸಿದ್ದರು.

ಮುಖ್ಯ ಶಿಕ್ಷಕನಿಗೆ ಕಾರಣ ಕೇಳಿ ನೋಟಿಸ್ ಕೂಡಾ ಜಾರಿಗೊಳಿಸಿದ್ದರು. ಇದೀಗ ಡಿಡಿಪಿಐ ಅವರ ವರದಿ ಆಧರಿಸಿ ಶಾಲಾ ಶಿಕ್ಷಣ‌ ಇಲಾಖೆ ಆಯುಕ್ತರಾದ ಕಾವೇರಿ ಅವರು ಮುಖ್ಯ ಶಿಕ್ಷಕನ ನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ

ಸುದ್ದಿ ಸಂತೆ ನ್ಯೂಸ್ ಮೈಸೂರು......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......