LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕ ಬಸವರಾಜ ಅಮಾನತು - ವರದಿ ಪಡೆದು ಅಮಾನತು ಮಾಡಿದ DDPI.....

ಕಲಬುರಗಿ -

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಲಬುರಗಿ ತಾಲ್ಲೂಕಿನ ‌ಸರ್ಕಾರಿ ಪ್ರೌಢಶಾಲೆಯೊಂದರ ಇಂಗ್ಲಿಷ್ ಭಾಷಾ ಶಿಕ್ಷಕ ಬಸವರಾಜ ದ್ಯಾಮಾ ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೂರ್ಯ ಕಾಂತ ಮದಾನೆ  ಆದೇಶಿಸಿದ್ದಾರೆ.ಶಿಕ್ಷಕ ಬಸವರಾಜ ದ್ಯಾಮಾ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಹಾಗೂ ಹಳೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ತನಿಖೆಗೆ ಬಿಇಒ ಶಿವಗುಂಡಪ್ಪ ಸಿದ್ಧಣಗೋಳ ನೇತೃತ್ವದಲ್ಲಿ ಸದಸ್ಯರ ಸಮಿತಿ ರಚಿಸ ಲಾಗಿತ್ತು. ವಿಚಾರಣಾ ಸಮಿತಿಯು ಶಾಲೆಗೆ ಭೇಟಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದಿತ್ತು. ಜೊತೆಗೆ ಆರೋಪ ಎದುರಿಸುತ್ತಿರುವ ಶಿಕ್ಷಕನಿಗೆ ನೋಟಿಸ್‌ ಕೊಟ್ಟು ಉತ್ತರ ಪಡೆಯಲಾಗಿತ್ತು.

'ಶಿಕ್ಷಕ ಬಸವರಾಜ ದ್ಯಾಮಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುವ ಮೂಲಕ ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ ವಿಚಾರಣೆ ಕಾಯ್ದಿರಿಸಿ ಶಿಕ್ಷಕನನ್ನು ಅಮಾನತು ಗೊಳಿಸಲಾಗಿದೆ' ಎಂದು ಕಲಬುರಗಿ ಡಿಡಿಪಿಐ ಸೂರ್ಯಕಾಂತ ಮದಾನೆ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕಲಬುರಗಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......