ಒಡಿಶಾ -
ಕರ್ತವ್ಯದ ವೇಳೆಯಲ್ಲಿ ಮದ್ಯ ಸೇವಿಸಿ ಶಾಲೆಯ ಮುಖ್ಯ ದ್ವಾರಕ್ಕೆ ಬೀಗ ಹಾಕಿ ಮಲಗಿದ್ದ ಆರೋಪದಲ್ಲಿ ಒಡಿಶಾದ ಕೇಂದ್ರಪಾರಾ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಈ ವೇಳೆ ಸುಮಾರು 35 ವಿದ್ಯಾರ್ಥಿಗಳು ಶಾಲೆ ಯೊಳಗೆ ಸಿಲುಕಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಡೆರಾಬಿಶ್ ಬ್ಲಾಕ್‌ನ ಕುರುಜಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುರಾ ಸರ್ಕಾರಿ ಪ್ರಾಥ ಮಿಕ ಶಾಲೆಯ ಮುಖ್ಯಶಿಕ್ಷಕ ಸುನಕರ್ ನಾಯಕ್ ಆರೋಪಿ.1ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ಶಾಲೆಯೊಳಗಿದ್ದಾಗ ಮುಖ್ಯ ದ್ವಾರಕ್ಕೆ ಬೀಗ ಹಾಕಿದ್ದಾರೆ ಎನ್ನಲಾಗಿದೆ.
ಭಯಗೊಂಡ ವಿದ್ಯಾರ್ಥಿಗಳು ಕೂಗಿಕೊಂಡಿದ್ದು, ಸ್ಥಳೀ ಯರು ಶಾಲೆಯತ್ತ ಧಾವಿಸಿ ಬೀಗ ತೆರೆದು ಮಕ್ಕಳನ್ನು ಹೊರಗೆ ಕರೆತಂದಿದ್ದಾರೆ.ಮುಖ್ಯಶಿಕ್ಷಕರ ಈ ಕೃತ್ಯದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪೋಷಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇಲಾಖಾ ವಿಚಾರಣೆಯಲ್ಲಿ ಆರೋಪಗಳುದೃಢಪಟ್ಟಿವೆ ಎಂದು ಡೆರಾಬಿಶ್ ಬ್ಲಾಕ್ ಶಿಕ್ಷಣಾಧಿಕಾರಿ ಮದನ್ ಮೋಹನ್ ಕರ್ ತಿಳಿಸಿದ್ದಾರೆ. ಶಾಲೆಯ ಮುಖ್ಯಸ್ಥರ ಇಂತಹ ವರ್ತನೆ ಶಿಕ್ಷಕ ವೃತ್ತಿಗೆ ತಕ್ಕುದಲ್ಲ ಎಂದು ಅವರು ಹೇಳಿದ್ದಾರೆ.ಶಾಲೆಯಲ್ಲಿ ಸುಮಾರು 35 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರಿದ್ದಾರೆ. ಮತ್ತೊಬ್ಬ ಶಿಕ್ಷಕರು ರಜೆಯಲ್ಲಿದ್ದ ಕಾರಣ ನಾಯಕ್ ಒಬ್ಬರೇ ಶಾಲೆಯಲ್ಲಿ ಇದ್ದರು ಎನ್ನಲಾಗಿದೆ.
ಸುದ್ದಿ ಸಂತೆ ನ್ಯೂಸ್ ಒಡಿಶಾ......