LIVE TV LocalCrimeNationalInternationalPoliticsEducationTechnologyEntertainmentSportsFeature
State News

ಈಗಷ್ಟೇ ಭಡ್ತಿ ಪಡೆದ ಮುಖ್ಯಶಿಕ್ಷಕ ವೆಂಕಟೇಶ್ ಇನ್ನೂ ನೆನಪು ಮಾತ್ರ ಅನಾಥವಾಯಿತು ಇಲಾಖೆ.....

ಶಿವಮೊಗ್ಗ -

ರಸ್ತೆ ಅಪಘಾತದಲ್ಲಿ ಮುಖ್ಯ ಶಿಕ್ಷಕರೊಬ್ಬರು ಸಾವಿಗೀಡಾ ಗಿದ್ದಾರೆ.ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಸಮೀಪ ನಾಗ ರವಳ್ಳಿ ಬಳಿ ಈ ಘಟನೆ ನಡೆದಿದೆ.51 ವರ್ಷ ಪ್ರಾಯದ ವೆಂಕಟೇಶ್ ಮೃತ ಶಿಕ್ಷಕರಾಗಿದ್ದು ಇವರು ಬೈಕ್‌ನಲ್ಲಿ ಬರುತ್ತಿ ದ್ದಾಗ ತಿರುವೊಂದರಲ್ಲಿ ಓಮ್ನಿ ಕಾರೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಗಂಭೀರವಾಗಿ ಗಾಯಗೊಂಡ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೂಲತಃ ಕೊಪ್ಪ ತಾಲ್ಲೂಕಿನ ಬೊಮ್ಲಾಪುರದವರಾದ ವೆಂಕಟೇಶ್, ಕಟ್ಟೆಹಕ್ಲು ಹಿರಿಯ ಪ್ರಾಥಮಿಕ ಶಾಲೆಯ ಹೆಡ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.ಈ ವರ್ಷ ಪ್ರಮೋಶನ್ ಪಡೆದು ಹೆಡ್‌ ಮಾಸ್ಟರ್ ಆಗಿ ಕಟ್ಲೆ ಹಕ್ಲು ಶಾಲೆಯಲ್ಲಿ ಕೆಲಸ ಮಾಡುತ್ತಿ ದ್ದರು.ತೀರ್ಥಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನೂ ಇತ್ತೀಚೆಗೆ ಅಪಘಾತಗಳು ಹೆಚ್ಚೆಚ್ಚು ಸಂಭವಿಸು ತ್ತಲೇ ಇರುತ್ತವೆ.ಪ್ರತಿವರ್ಷ ರಸ್ತೆ ಅಪಘಾತಕ್ಕೆ ದೇಶದಲ್ಲಿ ಸಾವನ್ನಪ್ಪುವವರ ಅಂಕಿ ಅಂಶಗಳನ್ನು ನೋಡಿದರೆ ಗಾಬರಿಯಾಗುವುದು ಗ್ಯಾರಂಟಿ.2020ರಲ್ಲಿ ಭಾರತದಲ್ಲಿ ಒಟ್ಟು 366,138 ರಸ್ತೆ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 131,714 ಜನ ಸಾವನ್ನಪ್ಪಿದ್ದಾರೆ.ರಸ್ತೆ ಅಪಘಾ ತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಸ್ತೆ ಅಪಘಾತ ಗಳಲ್ಲಿ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಭಾರತವು ವಿಶ್ವದಲ್ಲೇ ಅಗ್ರಸ್ಥಾನದಲ್ಲಿದೆ ಎಂದು ಹೇಳಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......