LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾಲ್ಗೆಜ್ಜೆ ನೀಡಿದ ಕೊಲೆ ಸುಳಿವು - ನಿನೇಷ್ಟು ಕ್ರೂರಿ ಸಿದ್ದರಾಜು

ಮೈಸೂರು -

ಅದೊಂದು ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವತಿ ಶವ.ಇದನ್ನು ನೋಡಿದ ಪೊಲೀಸರಿಗೆ ಕೊಲೆಯೋ ಆತ್ಮಹತ್ಯೆಯೋ ಎಂಬ ಗೊಂದಲದಲ್ಲಿದ್ದರು.ಕೊನೆಗೂ ಪೊಲೀಸರಿಗೆ ಆ ಒಂದು ಕಾಲ್ಗೆಜ್ಜೆ ನೀಡಿತ್ತು ಇಡೀ ಪ್ರಕರಣದ ಸುಳಿವು. ಅಂದಹಾಗೆ ಕಾಲ್ಗೆಜ್ಜೆ‌ ನೀಡಿದ ಸುಳಿವಿನ ಜಾಡು ಹಿಡಿದ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿ ಪ್ರಕರಣವನ್ನ ಭೇದಿಸಿದ್ದಾರೆ.

ಹೌದು ಇಂಥದೊಂದು ಅಮಾನವೀಯ ಘಟನೆಯೊಂದು ನಡೆದಿದ್ದು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ರಸ್ತೆ ಬದಿಯಲ್ಲಿ‌.ರಸ್ತೆ ಪಕ್ಕದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವತಿಯ ಶವ ಪ್ರಕರಣವನ್ನ ಭೇದಿಸುವಲ್ಲಿ ಪಿರಿಯಾಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೌದು ಮೃತ ಯುವತಿಯನ್ನು ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಭಾಗ್ಯ (೧೮) ಎಂದು ಗುರುತಿಸಲಾಗಿದೆ. ತನ್ನ ಪ್ರಿಯಕರನಿಂದಲೇ ಹತ್ಯೆಯಾಗಿರೋದು ಪೊಲೀಸರ ತನಿಖೆಯಿಂದ ಬಯಲಾಗಿದೆ.ಕಳೆದ ನವಂಬರ್ 8 ರಂದು ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ರಸ್ತೆ ಬದಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಭಾಗ್ಯ ಅವರ ಶವ ಪತ್ತೆಯಾಗಿತ್ತು. ನಂಜನಗೂಡು ತಾಲ್ಲೂಕಿನ ಕರಳಾಪುರದ ಸಿದ್ದರಾಜು ಹಾಗೂ ಹುಲ್ಲಹಳ್ಳಿಯಲ್ಲಿ ವಕೀಲರೊಬ್ಬರ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದಳು ಭಾಗ್ಯ. ಭಾಗ್ಯ ಮತ್ತು ಸಿದ್ದರಾಜು ಪರಸ್ಪರ ಪ್ರೀತಿಸುತ್ತಿದ್ದರು. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಸಿದ್ದರಾಜು ಭಾಗ್ಯಳ ಜೊತೆ ದೈಹಿಕ ಸಂಬಂಧವನ್ನೂ ಹೊಂದಿದ್ದ ಎನ್ನಲಾಗಿದೆ. ದಿನ ಕಳೆದಂತೆ ಸಿದ್ದರಾಜು ಭಾಗ್ಯಳಿಂದ ದೂರ ಉಳಿದು ನಿರ್ಲಕ್ಷ್ಯ ಮಾಡಿದ್ದಾನೆ. ಇದರಿಂದ ಆತಂಕಕ್ಕೊಳಗಾದ ಭಾಗ್ಯ ಮದುವೆಯಾಗು, ಇಲ್ಲ ಅಂದ್ರೆ ನಾನು ಡೆತ್ ನೋಟ್ ಬರೆದಿಟ್ಟು ಸಾಯ್ತೀನಿ ಅಂತ ಎಚ್ಚರಿಕೆ ನೀಡಿದ್ದಳು. ಆದರೆ, ಮದುವೆ ಆಗಲು ನಿರಾಕರಿಸಿದ್ದ ಪಾಪಿ ಸಿದ್ದರಾಜು, ಭಾಗ್ಯಳನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಅದರಂತೆ ತನ್ನ ಸ್ನೇಹಿತ ಪ್ರಸನ್ನ ಕುಮಾರ್‌ ಜೊತೆ ಸ್ಕೆ‌ಚ್‌ ಹಾಕಿ, ಭಾಗ್ಯಳನ್ನು ಬಾ ಧರ್ಮಸ್ಥಳಕ್ಕೆ ಹೋಗಿ ಮದುವೆಯಾಗೋಣ ಎಂದು ನಂಬಿಸಿ ಕಾರಿನಲ್ಲಿ ಕರೆದೊಯ್ದಿದ್ದ.

ಪಿರಿಯಾಪಟ್ಟಣ ಬಳಿ ತೆರಳುತ್ತಿದ್ದಂತೆ ಕೆಲ್ಲೂರು ನಿರ್ಜನ ಪ್ರದೇಶದಲ್ಲಿ ಕತ್ತು ಹಿಸುಕಿ,ಉಸಿರುಗಟ್ಟಿಸಿ ಭಾಗ್ಯಳನ್ನ ಕೊಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಗಿದ್ದರು.ಬಳಿಕ ರಸ್ತೆ ಬದಿ ಅರೆಬೆಂದ ಸ್ಥಿತಿಯಲ್ಲಿ ಯುವತಿ ಶವ ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು.ಶವ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪಿರಿಯಾಪಟ್ಟಣ ಪೊಲೀಸರು ಅನುಮಾನಾಸ್ಪದ ಸಾವು ಎಂದು ಕೇಸ್ ದಾಖಲಿಸಿಕೊಂಡಿದ್ರು. ಈ ನಡುವೆ ಭಾಗ್ಯಳ ತಂದೆ ನಂಜನಗೂಡಿನ ಹುಲ್ಲಹಳ್ಳಿ ಠಾಣೆಯಲ್ಲಿ ತಮ್ಮ ಮಗಳು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಅರೆಬೆಂದ ಸ್ಥಿತಿಯ ಯುವತಿಯ ಶವವನ್ನ ನೋಡಿದ ಪೋಷಕರಿಗೆ ಇದು ಭಾಗ್ಯಳ ಶವ ಅಲ್ಲ ಅಂದುಕೊಂಡಿದ್ರು. ಆದ್ರೆ ಇನ್ನೇನು ವಾಪಾಸ್ ಆಗೋಣ ಅನ್ನುವ ವೇಳೆಗೆ ಮೃತ ಯುವತಿಯ ಕಾಲಿನಲ್ಲಿ ಕಾಲ್ಗೆಜ್ಜೆಯನ್ನ ನೋಡಿದ್ದಾರೆ.

ಅಲ್ಲೆ ಬರಸಿಡಿಲು ಬಡಿದಂತೆ ಇದು ನಮ್ಮ ಮಗಳೇ ಸ್ವಾಮಿ ಅಂದಿದ್ಧಾರೆ. ಕೂಡಲೇ ಎಚ್ಚೆತುಕೊಂಡ ಪೊಲೀಸರು ಪ್ರಕರಣದ ಬೆನ್ನತ್ತಿದ್ದಾರೆ. ಹೀಗೆ ಬೆನ್ನತ್ತಿ ಹೊರಟ ಪೊಲೀಸರಿಗೆ ಭಾಗ್ಯಳ ಪ್ರಿಯಕರ ಸಿದ್ದರಾಜು ಕೊಲೆ ಮಾಡಿರೋದು ಕಂಡು ಬಂದಿದೆ. ಈ ಸಂಬಂಧ ಪ್ರಿಯಕರ ಸಿದ್ದರಾಜು, ಹತ್ಯೆಗೆ ಸಹಕರಿಸಿದ ಪ್ರಸನ್ನ ಕುಮಾರ್‌ ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಆರೋಪಿ ಸಿದ್ದರಾಜು

ಒಟ್ಟಾರೆ ಪ್ರೀತಿ ಪ್ರೇಮದಾ ಹೆಸರಲ್ಲಿ ತಮ್ಮ ಕಾಮ ತೃಷೆ ತೀರಿಸಿಕೊಳ್ಳುವ ಇಂತಹ ಪಾಪಿಗಳ ವಿರುದ್ದ ನಮ್ಮ ಹೆಣ್ಮಕ್ಕಳು ಹುಷರಾಗಿರಬೇಕು‌ ಇದು ಸುದ್ದಿ ಸಂತೆ ವೇಬ್ ನ್ಯೂಸ್ ಕಳಕಳಿ ಕಾಳಜಿ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...