LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ ಮಾಡಿದ ಪೊಲೀಸರು

ಬೆಂಗಳೂರು -

ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಳಿ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಯುವತಿಯನ್ನು ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ರಕ್ಷಿಸಿದ್ದಾರೆ.

'ಯಶವಂತಪುರ ನಿವಾಸಿಯಾದ 20 ವರ್ಷದ ಯುವತಿ, ಪದವೀಧರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ವರ್ಷಗಳ ಹಿಂದಷ್ಟೇ ಮದುವೆಯಾಗಿತ್ತು. ಅವರು ಆತ್ಮಹತ್ಯೆ ಯತ್ನಿಸುತ್ತಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು.ಸ್ಥಳಕ್ಕೆ ಹೋಗಿ ಅವರನ್ನು ರಕ್ಷಿಸಿ ಪೋಷಕರ ಜೊತೆ ಕಳುಹಿಸಲಾಗಿದೆ' ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

'ಕ್ಷುಲ್ಲಕ ಕಾರಣಕ್ಕಾಗಿ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ಯುವತಿ ಜಾಲಹಳ್ಳಿಯ ಜೆ.ಪಿ.ಪಾರ್ಕ್ ಸಮೀಪದ ರೈಲ್ವೆ ಹಳಿ ಮೇಲೆ ನಿಂತಿದ್ದರು.

ಅದನ್ನು ಗಮನಿಸಿದ ಸ್ಥಳೀಯರು, ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಹೊಯ್ಸಳ ಗಸ್ತು ವಾಹನದಲ್ಲಿದ್ದ ಭಾಗ್ಯಮ್ಮ ಹಾಗೂ ಮತ್ತೊಬ್ಬ ಸಿಬ್ಬಂದಿ, ಕೂಡಲೇ ಸ್ಥಳಕ್ಕೆ ಹೋಗಿ ಯುವತಿಯನ್ನು ರಕ್ಷಿಸಿದ್ದಾರೆ. ಪತಿ ಹಾಗೂ ಅವರ ಕುಟುಂಬದವರನ್ನು ಠಾಣೆಗೆ ಕರೆಸಿ, ಅವರ ಸಮ್ಮುಖದಲ್ಲೇ ಯುವತಿಗೆ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ ಜಾಲಹಳ್ಳಿ ಪೊಲೀಸರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...