LIVE TV LocalCrimeNationalInternationalPoliticsEducationTechnologyEntertainmentSportsFeature
State News

C & R ಗೆ ಆಗಲಿದೆ ತಿದ್ದುಪಡಿ - ತಿದ್ದುಪಡಿಯ ನಂತರ ಬದಲಾವಣೆಯಾಗಲಿದೆ ಬಡ್ತಿ ನಿಯಮಗಳು.....

ಬೆಂಗಳೂರು -

ಪದವಿ ಹಾಗೂ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಸುಮಾರು 58 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6ರಿಂದ 8ನೇ ತರಗತಿ ಬೋಧನೆಯ ಪದವೀಧರ ಶಿಕ್ಷಕ ವೃಂದಕ್ಕೆ ಬಡ್ತಿ ನೀಡುವ ಸಂಬಂಧ 2017ರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ (ಸಿಅಂಡ್‌ ಆರ್‌) ಶೀಘ್ರ ತಿದ್ದುಪಡಿ ತರಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಮೇಲ್ಮನೆಯಲ್ಲಿ ನಿಯಮ 330ರಡಿ ಕಾಂಗ್ರೆಸ್‌ ಸದಸ್ಯ ರಾಜೋಜಿಗೌಡ ಅವರು ನೀಡಿದ ಸೂಚನಾ ಪತ್ರಕ್ಕೆ ಬುಧವಾರ ಉತ್ತರ ನೀಡಿದರು.

ಎನ್‌ಸಿಟಿಇಯು ಪ್ರಾಥಮಿಕ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಶಿಕ್ಷಕರಿಗೆ ಪಿಯುಸಿ, ಟಿಸಿಎಸ್‌/ಡಿಇಡಿ ಮತ್ತು 6ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಪದವಿ ಮತ್ತು ಟಿಸಿಎಸ್‌/ಡಿಇಡಿ ವಿದ್ಯಾರ್ಹತೆ ನಿಗದಿಪಡಿಸಿ ರುತ್ತದೆ. ಅದರಂತೆ 2027ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಿಅಂಡ್‌ ಆರ್‌ಗೆ ತಿದ್ದುಪಡಿ ತಂದು ಹೊಸ ನಿಯಮ ರಚಿಸಲಾಗಿದೆ.

ಈಗ ಪದವೀಧರರಾಗಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6ರಿಂದ 8ನೇ ತರಗತಿ ಬೋಧನೆಗೆ ಬಡ್ತಿ ನೀಡಲು ನಿಯಮಗಳನ್ನು ತಿದ್ದುಪಡಿ ಮಾಡಬೇಕು. ಇದು ನನ್ನ ಇಲಾಖೆಗೆ ಮಾತ್ರ ಸಂಬಂಧಿಸಿಲ್ಲ, ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗೂ ಒಳಪಡುತ್ತದೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....