LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಕ್ಕೆ ಹೊಸದೊಂದು ಬೇಡಿಕೆ ಇಟ್ಟ ರಾಜ್ಯ ಸರ್ಕಾರಿ ನೌಕರರು -

ಬೆಂಗಳೂರು -

ರಾಜ್ಯ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರು ಹೊಸ ದೊಂದು ಬೇಡಿಕೆಯನ್ನು ಇಟ್ಟಿದ್ದಾರೆ ಹೌದು ವಿವಿಧ ಕಾರಣಗಳಿಂದಾಗಿ ಸರ್ಕಾರಿ ಇಲಾಖೆಗಳ ನೌಕರರಿಗೆ ಸೂಕ್ತ ಸಮಯಕ್ಕೆ ಸಂಬಳ ಸಿಗುತ್ತಿಲ್ಲ ಕೆಲವರು ತಿಂಗಳು ಗಳು, ಹಲವಾರು ವರ್ಷಗಳಿಂದ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.ಇದರಿಂದ ಯಾವುದೇ ತಪ್ಪಿಲ್ಲ ದಿದ್ದರೂ ಕರ್ನಾಟಕ ಸರ್ಕಾರದ ವಿಮಾ ಇಲಾಖೆಯಿಂದ (ಕೆಜಿಐಡಿ) ಸಾಲ ಪಡೆದವರು ಬಡ್ಡಿ ಪಾವತಿಸುವಂತಾ  ಗಿದೆ

ಜಿಲ್ಲಾ ಮತ್ತು ತಾಲೂಕು ಪಂಚಾಯತ್, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಕೆಲವು ಜಿಲ್ಲೆಗಳ ಕೆಲವು ಇಲಾಖೆಗಳ ಸರ್ಕಾರಿ ನೌಕರರಿಗೆ ಸೂಕ್ತ ಸಮಯಕ್ಕೆ ವೇತನ ಸಿಗುತ್ತಿಲ್ಲ ಸರ್ಕಾರದಿಂದ ಮಂಜೂರಾದ ಹುದ್ದೆಗಳು 7.7 ಲಕ್ಷವಾಗಿದ್ದು, ಅದರಲ್ಲಿ ಸುಮಾರು 5.4 ಲಕ್ಷ ಹುದ್ದೆ ಗಳನ್ನು ಭರ್ತಿ ಮಾಡಲಾಗಿದೆ.

ಸಿಬ್ಬಂದಿ ಹಾಗೂ ಹಣ ಕೊರತೆಯಿಂದಾಗಿ ಸರ್ಕಾರವು ಗುತ್ತಿಗೆ ನೌಕರರ ಮೇಲೆ ಹೆಚ್ಚು ಅವಲಂಬಿತವಾಗಿದೆ. ಇವರಿಗೂ ಕೂಡ ವೇತನ ಸೂಕ್ತ ಸಮಯಕ್ಕೆ ಸಿಗುತ್ತಿಲ್ಲ. ವೇತನ ವಿಳಂಬದಿಂದಾಗಿ ನೌಕರರು ಹೆಚ್ಚುವರಿ ಬಡ್ಡಿ ಯನ್ನುಪಾವತಿಸಬೇಕಾಗಿದೆ.ರಾಜ್ಯ ಸರ್ಕಾರವು 1 ಲಕ್ಷ ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡುತ್ತಿದೆ. 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ ನಂತರ ವೇತನ ಮತ್ತು ಪಿಂಚಣಿ ಸೇರಿದಂತೆ ಕನಿಷ್ಠ 22,000 ಕೋಟಿ ರೂ.ಗಳಿಂದ 25,000 ಕೋಟಿ ರೂ ವೆಚ್ಚ ಮಾಡುತ್ತಿದೆ.

ಈ ವೆಚ್ಚ ನಿರ್ವಹಣೆಗೆ ಸರ್ಕಾರವು ಹೆಣಗಾಡುತ್ತಿದೆ. ವೇತನ ಪಾವತಿ ವಿಳಂಬಕ್ಕೆ ಇದು ಕೂಡ ಒಂದು ಕಾರಣವಾಗಿದೆ ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮಾತನಾಡಿ, ಸರ್ಕಾರಿ ಸ್ವಾಮ್ಯ ಸಂಸ್ಥೆಯಾದ ಕೆಜಿಐಡಿ ಕಡಿಮೆ ಬಡ್ಡಿಯಲ್ಲಿ ಸರ್ಕಾರಿ ನೌಕರರಿಗೆ ಸಾಲ ನೀಡುತ್ತದೆ

ಪ್ರತಿ ತಿಂಗಳು ನಿರ್ದಿಷ್ಟ ದಿನಾಂಕದಂದು ಸಾಲದ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ. ಆದರೆ, ಸಂಬಳ ವಿಳಂಬವಾದಾಗ ಹಲವರಿಗೆ ಸಕಾಲಕ್ಕೆ ಬಡ್ಡಿ ಕಟ್ಟಲು ಸಾಧ್ಯವಾಗುತ್ತಿಲ್ಲ. ನಾನಾ ಕಾರಣಗಳಿಂದ ವೇತನ ವಿಳಂಬವಾಗುತ್ತಿದೆ. ಆದರೆ, ತಮ್ಮ ತಪ್ಪಿಲ್ಲದಿದ್ದರೂ ಹೆಚ್ಚುವರಿ ಬಡ್ಡಿ ಕಟ್ಟುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ವಿವಿಧ ಕಾರಣಗಳಿಂದಾಗಿ ಸರ್ಕಾರಿ ಇಲಾಖೆಗಳ ನೌಕರರಿಗೆ ಸೂಕ್ತ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ಇದರಿಂದ ಹಲವು ಸಮಸ್ಯೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ನನ್ನನ್ನು ಸಂಪರ್ಕಿಸಿದ್ದಾರೆ. ಹಾಗಾಗಿ, ಬಡ್ಡಿ ವಿಧಿಸದಂತೆ ತಡೆಯಲು ತಂತ್ರಾಂಶಗಳಲ್ಲೇ ಮಾರ್ಪಾಡು ಮಾಡುವಂತೆ ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......