ಬೆಂಗಳೂರು -
ಪರೀಕ್ಷಾ ಶುಲ್ಕದ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ ಹೌದು ಕರ್ನಾಟಕ ಸರ್ಕಾರವು ಪಿಯುಸಿ ಪರೀಕ್ಷಾ ಶುಲ್ಕ ವನ್ನು ಸಹ ಹೆಚ್ಚಳ ಮಾಡುವುದರೊಂದಿಗೆ ಶಾಕ್ ನೀಡಿತ್ತು. ಇದೀಗ ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕದ ವಿಚಾರದಲ್ಲೂ ಶಾಕ್ ನೀಡಲಾಗಿದೆ.
ಇತ್ತೀಚಿಗಷ್ಟೇ ಪಿಯುಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನೂ ಸಹ ಶೇ.5ರ ಏರಿಕೆ ಮಾಡುವ ಮೂಲಕ ಶಾಕ್ ಕೊಡಲಾಗಿದೆ. ಹೊಸದಾಗಿ ಪರೀಕ್ಷೆ ಬರೆಯುವವರು, ಪುನಾರಾ ವರ್ತಿತ ಅಭ್ಯರ್ಥಿಗಳ ನೋಂದಣಿ ಶುಲ್ಕದ ಜತೆಗೆ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇದೀಗ ಹೊಸದಾಗಿ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರವು ಪಿಯುಸಿ ಪರೀಕ್ಷಾ ಶುಲ್ಕದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿರುವುದು ತೀವ್ರ ಆಕ್ಷೇಪ, ವಿರೋಧ ವ್ಯಕ್ತವಾಗಿದೆ.ಕರ್ನಾಟಕ ಸರ್ಕಾರವು SSLC ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದೆ. 2027ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯುವ ಪರೀಕ್ಷೆಗಳಿಂದಲೇ ಹೊಸ ಶುಲ್ಕ ಅನ್ವಯವಾಗಲಿದೆ 2020ರ ಆದೇಶದಲ್ಲಿ ವಾರ್ಷಿಕ ವಾಗಿ ಪರೀಕ್ಷಾ ಶುಲ್ಕ ಪರಿಷ್ಕರಿಸಲು ನೀಡಿರುವ ಅವಕಾಶದ ಆಧಾರದ ಮೇಲೆ ಹೆಚ್ಚಳ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕದಲ್ಲಿ ಆಗಿರುವ ವ್ಯತ್ಯಾಸ ಈ ರೀತಿ ಇದೆ. ಈ ಹಿಂದೆ 710 ರೂ. ಶುಲ್ಕಪಾವತಿಸುತ್ತಿದ್ದ ಸಾಮಾನ್ಯ ಅಭ್ಯರ್ಥಿಗಳು (ಫ್ರೆಶರ್ಸ್) ಇನ್ಮುಂದೆ 746 ರೂ. ಪಾವತಿಸಬೇಕಾ ಗುತ್ತದೆ. ಹೊಸ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ 248 ರೂಪಾಯಿಯಿಂದ 260 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈಗಾಗಲೇ ನೋಂದಣಿಯಾ ಗಿರುವ ಖಾಸಗಿ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕವನ್ನು ಸಹ ಹೆಚ್ಚಳ ಮಾಡಲಾಗಿದೆ.
ಈ ಶುಲ್ಕವು 72 ರೂ. ನಿಂದ 76 ರೂ.ಗೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....