LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕೋವಿಡ್ ಪರಿಷ್ಕೃತ ಮಾರ್ಗ ಸೂಚಿಗಳು ಪ್ರಕಟ - ಹಬ್ಬ ಹರಿದಿನಗಳು ಸೇರಿದಂತೆ ಎಲ್ಲದಕ್ಕೂ ಬ್ರೇಕ್ ಹಾಕಿದ ರಾಜ್ಯ ಸರ್ಕಾರ.....

ಬೆಂಗಳೂರು‌ -

ಕೋವಿಡ್ ಎರಡನೆ ಅಲೆಯ ಪರಿಣಾಮ ಪ್ರಕರಣ ಗಳು ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಟಿಸಿದೆ ಈ ಹಿನ್ನೆಲೆಯಲ್ಲಿ ಯುಗಾದಿ, ಹೋಳಿ, ಶಬೇ ಬರಾಅತ್, ಗುಡ್ ಫ್ರೈಡೇ ಹಬ್ಬಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡದಂತೆ ನಿಷೇಧವನ್ನು ಹೇರಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿ ಸಿದ್ದು ಸಾರ್ವಜನಿಕ ಸ್ಥಳ ಮೈದಾನ, ಪಾರ್ಕ್ ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಿದೆ. ಆದೇಶ ವನ್ನು ಉಲ್ಲಂಘಿಸಿದರೆ ಎನ್‍ಡಿಎಂಎ ಕಾಯ್ದೆಯಡಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ.ಹೀಗಾಗಿ ಹಬ್ಬಗಳಂದು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡುವುದು ಸಾಮಾನ್ಯ. ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಹಬ್ಬಗಳಂದು ಸಾರ್ವಜನಿಕವಾಗಿ ಗುಂಪು ಗೂಡುವಿಕೆಯನ್ನು ನಿರ್ಬಂಧಿಸಲಾಗಿದೆ.

ಹೊಸದಾಗಿ ಜಾರಿಗೆ ತಂದಿರುವ ಪರಿಷ್ಕೃತ ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರ ದ ಮುಖ್ಯ ಕಾರ್ಯದರ್ಶಿ ಆದೇಶ ಪತ್ರದಲ್ಲಿ ಸೂಚನೆ ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....