LIVE TV LocalCrimeNationalInternationalPoliticsEducationTechnologyEntertainmentSportsFeature
National News

DGP ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ಅಮಾನತು - ಅಚ್ಚರಿಯನ್ನುಂಟು ಮಾಡಿದ ಪೊಲೀಸ್ ಮಹಾನಿರ್ದೇಶಕರ ಅಮಾನತು ಪ್ರಕರಣ.....

ಹೈದರಾಬಾದ್ -

DGP ಸೇರಿದಂತೆ ಹಲವು ಪೊಲೀಸ್ ಅಧಿಕಾರಿ ಗಳ ಅಮಾನತು - ಅಚ್ಚರಿಯನ್ನುಂಟು ಮಾಡಿದ ಪೊಲೀಸ್ ಮಹಾನಿರ್ದೇಶಕರ ಅಮಾನತು ಪ್ರಕರಣ ಹೌದು ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್​ ನಾಯಕರನ್ನು ಭೇಟಿಯಾದ ಹಿನ್ನಲೆಯಲ್ಲಿ ಡಿಜಿಪಿ ಯನ್ನು ಅಮಾನತು ಮಾಡಿ ರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ಅಂಜನಿ ಕುಮಾರ್ ಅವರೇ ಅಮಾನತಾದವರಾಗಿದ್ದು ಚುನಾವಣಾ ಆಯೋಗವು ಅಮಾನತುಗೊಳಿಸಿ ಆದೇಶವನ್ನು ಮಾಡಿದೆ.ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಅಂಜನಿ ಕುಮಾರ್ ಅವರನ್ನು ಚುನಾವಣಾ ಆಯೋಗವು ಅಮಾನತು ಮಾಡಿ ಆದೇಶಿಸಿದೆ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲೇ ಕಾಂಗ್ರೆಸ್​ ರಾಜ್ಯ ಘಟಕದ ಅಧ್ಯಕ್ಷ ರೇವಂತ್​ ರೆಡ್ಡಿ ಅವರನ್ನು ಡಿಜಿಪಿ ಸೇರಿದಂತೆ ಇತರ ಪೊಲೀಸ್​ ಅಧಿಕಾರಿ ಗಳು ಭೇಟಿ ಮಾಡಿದ್ದರು.

ತೆಲಂಗಾಣದ 119 ಸದಸ್ಯ ಬಲದ ವಿಧಾನಸಭೆ ಯ ಚುನಾವಣಾ ಫಲಿತಾಂಶದಲ್ಲಿ ಆಡಳಿತಾ ರೂಢ ಬಿಆರ್​ಎಸ್​ ವಿರುದ್ಧ ಕಾಂಗ್ರೆಸ್​ ಗೆಲುವು ಸಾಧಿಸಿದೆ.ಕೈ ಪಡೆ 65 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಆರ್​ಎಸ್​ 35 ಸ್ಥಾನಗಳಿಗೆ ಕುಸಿ ದಿದೆ. ಬಿಜೆಪಿ 9 ಕ್ಷೇತ್ರ ಮತ್ತು ಎಐಎಂಐಎಂ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಚುನಾವಣೆಯ ಫಲಿತಾಂಶ ಪೂರ್ಣವಾಗಿ ಪ್ರಕಟವಾಗುವ ಮೊದಲೇ ಕಾಂಗ್ರೆಸ್​ ಸಿಎಂ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿರುವ ರೇವಂತ್​ ರೆಡ್ಡಿ ಅವರನ್ನು ಪೊಲೀಸ್​ ಅಧಿಕಾರಿ ಗಳು ಭೇಟಿಯಾಗಿ ಶುಭಾಶಯ ಕೋರಿದ್ದರು.

ಹೈದರಾಬಾದ್​ನಲ್ಲಿ ರೇವಂತ್ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿರುವ ಡಿಜಿಪಿ ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿ ಗಳು ಹೂಗುಚ್ಛ ನೀಡಿ ಅಭಿನಂದಿಸಿದ್ದರು. ತೆಲಂಗಾಣದ ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ)ಅಧಿಕಾರಿ ಮಹೇಶ್ ಭಾಗವತ್ ಸಹ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು

ಈ ಒಂದು ವಿಡಿಯೋ ಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗವು ಡಿಜಿಪಿ ಯವರನ್ನು ಅಮಾನತು ಮಾಡಿ ಉಳಿದ ಸಿಬ್ಬಂದಿಗಳನ್ನು ಕೂಡಾ ನೊಟೀಸ್ ನೀಡಿದ್ದು ಮುಂದೇನಾಗುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಹೈದರಾಬಾದ್.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....