LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕ ಈಶ್ವರ್ ರೆಡ್ಡಿ ಅಮಾನತು.....ದೂರು ನೀಡಿದ ವಿದ್ಯಾರ್ಥಿನಿ.....

ಚಿಕ್ಕಬಳ್ಳಾಪುರ -

ಚಿಂತಾಮಣಿ ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಹಾಗೂ ಪ್ರಭಾರ ಪ್ರಾಂಶುಪಾಲ ಈಶ್ವರ್ ರೆಡ್ಡಿ ಬಿ. ಅವರನ್ನು ವಿದ್ಯಾರ್ಥಿ ನಿಯೊಂದಿಗೆ ಅಸಮರ್ಪಕವಾಗಿ ಸ್ಪರ್ಶಿಸಿದ ಆರೋಪದ ಹಿನ್ನೆಲೆಯಲ್ಲಿಅಮಾನತುಗೊಳಿಸಲಾಗಿದೆ

ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಸೆ.28 ರಂದು POCSO ಕಾಯ್ದೆಯಡಿ ಪ್ರಕರಣ ಸಂಖ್ಯೆ 139/2026 ದಾಖಲಾದ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ.

2026ರ ಸೆ.26ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಶಾಲೆಯ ಮೊದಲ ಮಹಡಿಯ ಪ್ರಥಮ ಚಿಕಿತ್ಸೆ ಕೊಠಡಿಯಲ್ಲಿ ಪ್ರಭಾರ ಪ್ರಾಂಶುಪಾಲರು ಅಸಮರ್ಪಕವಾಗಿ ಸ್ಪರ್ಶಿಸಿದ್ದಾರೆ ಎಂದುವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಈ ಕುರಿತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿ ಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿ ಮತ್ತು ಶಿಕ್ಷಕರಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿ ದ್ದಾರೆ.

ಪ್ರಕರಣ ದ ಕುರಿತು ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.ಕರ್ನಾಟಕ ಸರ್ಕಾರಿ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ-1957ರ ನಿಯಮ 10(1)(ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ನಿಯಮ ಗಳು-2025ರ ಅನ್ವಯ ಈಶ್ವರ್ ರೆಡ್ಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿ ಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಬಳ್ಳಾಪುರ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತನಿಖೆ ಆರಂಭಿಸಿದ IGP ಶಶಿಕುಮಾರ್.....ಅಧಿಕಾರಿಗಳೊಂದಿಗೆ ಸಭೆ.....ಸರ್ಕಾರಿ ಶಾಲೆಯಲ್ಲಿ ಸ್ಪೋಟ ಅಧಿಕಾರಿಗಳ ನಿರ್ಲಕ್ಷ್ಯ.....ದಸರಾ ರಜೆಯಲ್ಲೂ ವಿಶೇಷ ತರಗತಿ.....ಶಿಕ್ಷಕರಿಗೆ ತಲೆನೋವು ತಂದಿಟ್ಟ ಶಾಲಾ ಶಿಕ್ಷಣ ಇಲಾಖೆ ಆದೇಶ.....ಅಕ್ಟೋಬರ್ ತಿಂಗಳಲ್ಲಿ ಭರ್ಜರಿ ರಜೆ ರಜೆ.....ಅಕ್ಟೋಬರ್ ತಿಂಗಳದ ರಜೆ ಪಟ್ಟಿ ಇಲ್ಲಿದೆ.....ರಾಜ್ಯ ಸರ್ಕಾರಿ ನೌಕರರೇ ಗಮನಿಸಿ.....ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸಿಸಲು ಸರ್ಕಾರದ ಆದೇಶ.....ವಿಶೇಷ ಸರ್ಕಾರಿ ಶಾಲೆ ಉದ್ಘಾಟನೆ.....ಸರ್ಕಾರಿ ಶಾಲೆಯ ಕಟ್ಟಡದ ನಿರ್ಮಾಣದ ಹಿಂದೆ ಇದೆ ದೊಡ್ಡ ಕಥೆ.....ಶಿಕ್ಷಕ ಈಶ್ವರ್ ರೆಡ್ಡಿ ಅಮಾನತು.....ದೂರು ನೀಡಿದ ವಿದ್ಯಾರ್ಥಿನಿ.....ಶಿಕ್ಷಕರ ವೇತನ ಅನುದಾನ ಬಿಡುಗಡೆ ಗಾಗಿ ಇಲಾಖೆಯ ಅಧಿಕಾರಿಗಳ ಭೇಟಿ..... ಭೇಟಿ ಮಾಡಿ ಅನುದಾನ ಬಿಡುಗಡೆಗೆ ಒತ್ತಾಯಿಸಿದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ.....ಪದವೀಧರ ಶಿಕ್ಷಕರ ಸಂಘಕ್ಕೆ ನೂತನ ಟೀಮ್..... ಅಧ್ಯಕ್ಷರಾಗಿ ನಿರುಪಾದಿ ಅವಿರೋಧ ಆಯ್ಕೆ.....ಪ್ರತಿ ಶನಿವಾರ ರಜೆ ಘೋಷಣೆ.....ನೌಕರರ ಹೋರಾಟಕ್ಕೆ ಮಣಿದ ಸರ್ಕಾರ.....