ಕುಶಾಲನಗರ -
ಕುಶಾಲನಗರ ಪಟ್ಟಣದ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಗಿಲು ಮುರಿದು ಕ್ರೀಡಾ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ ಶಾಲಾ ಅಲಂಕಾರಿಕ ಗಿಡಗಳ ಕುಂಡಗಳನ್ನು ಒಡೆದು ಹಾನಿ ಮಾಡಿದ್ದಾರೆ.ಶಾಲೆ ಕೊಠಡಿಯ ಬಾಗಿಲನ್ನು ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಫುಟ್ಬಾಲ್ಗಳು ಸೇರಿದಂತೆ ಇತರೆ ವಸ್ತುಗಳನ್ನು ಕಳವು ಮಾಡಿದ್ದಾರೆ.
ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲು ಇಡ ಲಾಗಿದ್ದ ಸುಮಾರು 10ರಿಂದ 12 ಗಿಡದ ಕುಂಡಗಳನ್ನು ಒಡೆದು ಹಾನಿಗೊಳಿಸಿದ್ದಾರೆ.ಶಾಲೆಯ ಆಸ್ತಿಪಾಸ್ತಿ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಇಂತಹ ಕೃತ್ಯ ಗಳಿಂದ ವಿದ್ಯಾರ್ಥಿಗಳ ಕಲಿಕಾ ವಾತಾವರಣಕ್ಕೆ ಧಕ್ಕೆ ಯಾಗುತ್ತದೆ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೂ ತೊಂದರೆಯಾಗುತ್ತದೆ. ದುಷ್ಕೃತ್ಯವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದನ್ ಖಂಡಿಸಿದ್ದಾರೆ.
ಈ ಕುರಿತು ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಕಳ್ಳತನ ಮತ್ತು ಆಸ್ತಿಪಾಸ್ತಿಗೆ ಹಾನಿ ಮಾಡಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಕುಶಾಲನಗರ.....