LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮೂವರು ಶಿಕ್ಷಕಿಯರು ಅಮಾನತು - ಮೂವರು ಶಿಕ್ಷಕಿಯರನ್ನು ಅಮಾನತು ಮಾಡಿದ DDPI.....

ಮೂಡಿಗೆರೆ -

ಮೂವರು ಶಿಕ್ಷಕಿಯರನ್ನು ಅಮಾನತು ಮಾಡಿದ ಘಟನೆ ಮೂಡಿಗೆರೆ ಯಲ್ಲಿ ನಡೆದಿದೆ.ಶಾಲಾ ಅವಧಿಯಲ್ಲಿ ಮಕ್ಕಳ ಎದುರು ಜಗಳವಾಡಿ ಕರ್ತವ್ಯಲೋಪ ಎಸಗಿದ್ದ ತಾಲ್ಲೂಕಿನ ಕಿರುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ಶಿಕ್ಷಕಿಯರನ್ನು ಡಿಡಿಪಿಐ ಜಿ.ಕೆ.ಪುಟ್ಟರಾಜು ಅಮಾನತುಗೊಳಿಸಿದ್ದಾರೆ.

ಶಿಕ್ಷಕಿಯರಾದ ಕಮಲಮ್ಮ, ವೀಣಾ ಮತ್ತು ಸುಶೀಲಾ ಅಮಾನತುಗೊಂಡವರಾಗಿದ್ದು ಪ್ರತಿನಿತ್ಯ ಶಾಲೆಯಲ್ಲಿ ಮಕ್ಕಳ ಎದುರು ಜಗಳವಾಡುತ್ತಿದ್ದು ಮಕ್ಕಳಿಗೆ ಪಾಠ ಮಾಡದೆ ಶೈಕ್ಷಣಿಕ ಚಟುವಟಿಕೆಗಳಿಂದ ದೂರವಿದ್ದು, ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು, ಮಕ್ಕಳ ಪೋಷಕರು ಆರೋಪಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ಚಂದ್ರ ಶಾಲೆಗೆ ಪರಿಶೀಲನೆಗೆ ಬಂದಾಗ, ಮಕ್ಕಳ ಬಿಸಿಯೂಟದ ಸಾಮಗ್ರಿಗಳನ್ನು ಸಾಗಿಸುವ ಸಲುವಾಗಿ ಶಿಕ್ಷಕಿ ಬೇರೊಂದು ಕೊಠಡಿಯಲ್ಲಿ ಶೇಖರಿಸಿಟ್ಟಿದ್ದನ್ನು ಸಾರ್ವಜನಿಕರ ಎದುರು ಪತ್ತೆ ಹಚ್ಚಿದ್ದರು. ಮುಖ್ಯ ಶಿಕ್ಷಕಿ ಯನ್ನು ಬೇರೆ ಶಾಲೆಗೆ ನಿಯೋಜನೆ ಮೇಲೆ ವರ್ಗಾವಣೆ ಮಾಡಲಾಗಿತ್ತು.

ಜೂನ್‌ನಿಂದ ಮತ್ತೆ ಇದೇ ಶಾಲೆಗೆ ಬಂದ ಮುಖ್ಯ ಶಿಕ್ಷಕಿ ಕಮಲಮ್ಮ ಮತ್ತೆ ಸಹ ಶಿಕ್ಷಕಿಯರೊಂದಿಗೆ ಜಗಳ ಮುಂದುವರಿಸಿದ್ದರು ಸರಿಯಾಗಿ ಪಾಠ ನಡೆಯದ ಕಾರಣ ಪಾಲಕರು ಮಕ್ಕಳ ಟಿಸಿ ಪಡೆದುಕೊಂಡು ಬೇರೆ ಶಾಲೆಗಳಿಗೆ ದಾಖಲಿಸಿದ್ದರು ಇದರಿಂದ 150 ಇದ್ದ ವಿದ್ಯಾರ್ಥಿಗಳ ಸಂಖ್ಯೆ 34ಕ್ಕೆ ಇಳಿದಿತ್ತು.

ಗ್ರಾಮಸಭೆಯಲ್ಲಿ ಶಾಲೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದು ಮೂವರು ಶಿಕ್ಷಕಿಯರನ್ನು ಅಮಾನತುಗೊಳಿಸುವಂತೆ ನಿರ್ಣಯ ಕೈಗೊಳ್ಳಲಾಗಿತ್ತು ಎಸ್‌ಡಿಎಂಸಿ ಹಾಗೂ ಮಕ್ಕಳ ಪೋಷಕರು ಹಳೆಯ ವಿದ್ಯಾರ್ಥಿಗಳು ನೀಡಿದ ದೂರಿನಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ತಂಡ 2 ಬಾರಿ ತನಿಖೆ ನಡೆಸಿ ವರದಿ ನೀಡಿದ್ದರು.ಡಿಡಿಪಿಐ ಅಮಾನತು ಆದೇಶ ಸಿದ್ಧಪಡಿಸಿದ್ದರೂ,ಕೊನೆಯ ಕ್ಷಣದಲ್ಲಿ ಆದೇಶವನ್ನು ಶಿಕ್ಷಕಿಯರಿಗೆ ಜಾರಿಗೊಳಿಸದಂತೆ ತಡೆಯಲಾಗಿತ್ತು.

ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಶಾಲೆಗೆ ಮಕ್ಕಳನ್ನು ಕಳುಹಿಸುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದರು. ಎಸ್‌ಡಿಎಂಸಿ ಸದಸ್ಯರು ಸಾಮೂಹಿಕವಾಗಿ ರಾಜಿನಾಮೆ ನೀಡಲು ಮುಂದಾಗಿದ್ದರು.ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಿಳಿದುಕೊಂಡ ಅಧಿಕಾರಿಗಳು ಮೂವರು ಶಿಕ್ಷಕಿಯರಿಗೆ ಅಮಾನತು ಆದೇಶವನ್ನು ಜಾರಿಗೊಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮೂಡಿಗೆರೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....