LIVE TV LocalCrimeNationalInternationalPoliticsEducationTechnologyEntertainmentSportsFeature
State News

ಜಿಂಕೆ ,ಕಡವೆಗಳ ಬುರುಡೆ ಜಾಲ ಪತ್ತೆ - ಮೂವರ ಬಂಧನ

ಚಾಮರಾಜನಗರ -

ಜಿಂಕೆ ಹಾಗೂ ಕಡವೆಗಳ ಬುರುಡೆ ಮತ್ತು ಕೊಂಬುಗಳನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಮೂವರನ್ನು ಚಾಮರಾಜನಗರದಲ್ಲಿ ಬಂಧಿಸಲಾಗಿದೆ.ಈ ಕುರಿತಂತೆ ಖಚಿತವಾದ ಮಾಹಿತಿಯನ್ನು ಪಡೆದುಕೊಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಸಿಐಡಿ ಪೊಲೀಸ್ ಮತ್ತು ಅರಣ್ಯ ಸಂಚಾರಿ ದಳದ ಸಿಬಂದ್ದಿಗಳು ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಸಿಐಡಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಜಿಂಕೆ ಮತ್ತು ಕಡವೆ ಕೊಂಬುಗಳ ಸಾಗಾಣಿಕೆ ಕುರಿತು ಖಚಿತ ಮಾಹಿತಿ ಪಡೆದು ದಾಳಿ ಮಾಡಿದ ಸಿಐಡಿ ಪೊಲೀಸರು ಮಾಲು ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

26 ವರ್ಷದ ಜಡೆಯ@ಸ್ವಾಮಿ, 35 ವರ್ಷದ ಶಿವಮಲ್ಲು ಹಾಗೂ 35 ವರ್ಷದ ಶಿವಣ್ಣ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೂ ಮೂವರು ಸಹ ಚಿಕ್ಕಲ್ಲೂರು ಸಮೀಪದ ರಾಚಪ್ಪಾಜಿ ನಗರದ ನಿವಾಸಿಗಳಾಗಿದ್ದಾರೆ.ಇವರಿಂದ ಎರಡು ತಲೆ ಮೂಳೆ ಸಹಿತ ಕಡವೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಂದು ಕಡವೆ ಕೊಂಬು ಹಾಗೂ ಮೂರು ಜಿಂಕೆಗಳ ಕೊಂಬುಗಳು ಮತ್ತು ಇದರ ಸಾಗಾಣಿಕೆಗೆ ಬಳಸಿದ್ದ ಬಜಾಜ್ ಡಿಸ್ಕವರ್ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ‌. ಆರೋಪಿಗಳು ಅಕ್ರಮವಾಗಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಅದರ ಕೊಂಬುಗಳನ್ನು ಬೇರ್ಪಡಿಸಿ ಅವುಗಳನ್ನು ಮಾರಾಟ ಮಾಡಿ ಅಡ್ಡ ದಾರಿಯಲ್ಲಿ ಹಣ ಸಂಪಾದಿಸುವ ಇರಾದೆಯಲ್ಲಿದ್ರು. ಅಂತೆಯೇ ಚಿಕ್ಕಲ್ಲೂರಿನ ಜಾತ್ರೆ ಮೈದಾನಕ್ಕೆ ಮಾಲು ತಂದು ಸಾಗಾಣಿಕೆಗೆ ತಯಾರಿ ನಡೆಸಿದ್ರು. ಈ ಬಗ್ಗೆ ಮಾಹಿತಿ ಪಡೆದ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಬ್‌ ಇನ್ಸ್ಪೆಕ್ಟರ್ ಮುದ್ದಮಾದೇವ ತಮ್ಮ‌ ಸಿಬ್ಬಂದಿಗಳೊಡನೆ ದಾಳಿ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಗಳ ವಿರುದ್ಧ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ‌.ದಾಳಿಯಲ್ಲಿ ಮುಖ್ಯ ಪೇದೆಗಳಾದ ಲೋಕೇಶ್, ಸ್ವಾಮಿ, ಬಸವರಾಜು, ತಖೀಉಲ್ಲಾ, ಶಂಕರ್, ಕುಮಾರಸ್ವಾಮಿ ಹಾಗೂ ಜೀಪ್ ಚಾಲಕ ಜಾಫರ್ ಪಾಲ್ಗೊಂಡಿದ್ರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....