ಬೆಂಗಳೂರು -
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ ಹೌದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.ಈ ಕುರಿತು ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026ರ ಅಕ್ಟೋಬರ್ 19ರಂದು ಅಧಿಸೂಚನೆ ಹೊರಡಿಸಿದೆ.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳಾದ ರಾಜ್ಯ ಯೋಜನಾ ನಿರ್ದೇಶಕರು, ರಾಜ್ಯ ಯೋಚನಾ ನಿರ್ದೇಶಕರ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಇವರನ್ನು ಸಾರ್ವಜನಿಕ ಮತ್ತು ಆಡಳಿ ತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....