ಬೆಂಗಳೂರು -
:ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದ ಸರ್ಜರಿಯನ್ನು ಮಾಡಿದೆ ಹೌದು ಆಡಳಿತಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ನಾಲ್ವರು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಈ ಕುರಿತು ಅಧಿಸೂಚನೆ ಪ್ರಕಟಿಸಿದೆ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ನೂತನ ಜಿಲ್ಲಾಧಿಕಾರಿಗಳು ನೇಮಕ ಗೊಂಡಿದ್ದಾರೆ.
ರಾಜ್ಯಪಾಲರ ಆದೇಶದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....