LIVE TV LocalCrimeNationalInternationalPoliticsEducationTechnologyEntertainmentSportsFeature
State News

4 ವರ್ಷದಲ್ಲಿ 7 ಬಾರಿ ವರ್ಗಾವಣೆ - ಡಿ.ರೂಪಾ ಖಾರವಾದ ಟ್ವೀಟ್ ಮಾಡಿದ್ದೇಕೆ?<br>ಸರಕಾರದ ನಡೆ ವಿರುದ್ಧ ಆಕ್ರೋಶ

ಬೆಂಗಳೂರು -

ಒಂದಿಲ್ಲೊಂದು ವಿಷಯದಲ್ಲಿ ಸುದ್ದಿಯಾಗುತ್ತಲೇ ಇರುವ ಐಪಿಎಸ್ ಅಧಿಕಾರಿ ಈಗ ಮತ್ತೊಂದು ಟ್ವೀಟ್ ಮಾಡಿದ್ದಾರೆ‌.ಹೌದು ಕಳೆದ 4 ವರ್ಷದಲ್ಲಿ 7 ಬಾರಿ ವರ್ಗಾವಣೆಗೊಳಗಾಗಿದ್ದಾರೆ.ಈ ಬಾರಿ ಪೊಲೀಸ್ ಅಧಿಕಾರಿಗೆ ಸಂಬಂಧವೇ ಇಲ್ಲದ ಕರಕುಶಲ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಅಧಿಕಾರ ವಹಿಸಿಕೊಂಡಿರುವ ರೂಪಾ, ಕೆಲಸ ಮಾಡುವವರಿಗೆ ಎಲ್ಲಿಯಾದರೇನು ಎಂದು ಪ್ರಶ್ನಿಸಿದ್ದಾರೆ. ತಮಗೆ ಅಲ್ಲಿ ಕೆಲಸ ಮಾಡಲು ತುಂಬಾ ಇಷ್ಟವಾಗಿದೆ ಎಂದೂ ಹೇಳಿದ್ದಾರೆ.

2016ರಲ್ಲಿ ಸಕಾಲ ಯೋಜನೆಯಲ್ಲಿ ಹೆಚ್ಚುವರಿ ಯೋಜನಾ ನಿರ್ದೇಶಕಾರಿದ್ದ ರೂಪಾ, 2017ರಲ್ಲಿ ಬಂಧೀಖಾನೆ ಡಿಐಜಿಯಾಗಿ ವರ್ಗಾವಣೆಯಾಗಿದ್ದರು. ಜೈಲಿನಲ್ಲಿನ ಅಕ್ರಮಗಳ ಕುರಿತು ದ್ವನಿ ಎತ್ತಿದ ಹಿನ್ನೆಲೆಯಲ್ಲಿ ಅಲ್ಲಿಂದ ರಸ್ತೆ ಸುರಕ್ಷತೆ ಆಯುಕ್ತರನ್ನಾಗಿ ವರ್ಗಾಯಿಸಲಾಗಿತ್ತು.

IPS ಅಧಿಕಾರಿ ನಿಂಬಾಳ್ಕರ್

ನಂತರದಲ್ಲಿ ಹೋಮ್ ಗಾರ್ಡ್ ಐಜಿಯಾಗಿ ವರ್ಗಾವಣೆ ಮಾಡಲಾಗಿತ್ತು. ಸ್ವಲ್ಪ ಕಾಲ ರೈಲ್ವೆ ಐಜಿಯಾಗಿ ವರ್ಗಾಯಿಸಿದ ಸರಕಾರ ನಂತರ ಗೃಹ ಇಲಾಖೆ ಸಹಾಯಕ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿತ್ತು. ಸಧ್ಯ ಕರಕುಶಲ ಅಭಿವೃದ್ಧಿ ನಿಗಮದ ಎಂಡಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಬಾರಿ ಅವರನ್ನು ವರ್ಗಾವಣೆ ಮಾಡಿದ್ದ ಸೆಫ್ ಸಿಟಿ ಯೋಜನೆಯಲ್ಲಿ ಇನ್ನೋರ್ವ ಐಪಿಎಸ್ ಅಧಿಕಾರಿ ಹೇಮಂತರ ನಿಂಬಾಳಕರ್ ಮತ್ತು ರೂಪಾ ನಡುವೆ ನಡೆದ ಆರೋಪ -ಪ್ರತ್ಯಾರೋಪ ಪ್ರಕರಣ. ಈ ಪ್ರಕರಣದಲ್ಲಿ ಇಬ್ಬರನ್ನೂ ವರ್ಗಾವಣೆ ಮಾಡಲಾಗಿದೆ.ಇದಕ್ಕಾಗಿ ರೂಪಾ ಸರಕಾರದ ವಿರುದ್ಧ ಖಾರವಾದ ಟ್ವೀಟ್ ಮಾಡಿದ್ದಾರೆ.

ಐಎಂಎ ಪ್ರಕರಣದಲ್ಲಿ ನಿಂಬಾಳಕರ್ ವಿಚಾರಣೆಗೆ ಸಿಬಿಐ ಅನುಮತಿ ಕೇಳಿತ್ತು. ಅದು ಪೆಂಡಿಂಗ್ ಇತ್ತು. ರೂಪಾ ಗೃಹ ಇಲಾಖೆಗೆ ಹೋದ ನಂತರ ಸರಕಾರ ಅನುಮತಿ ನೀಡಿತ್ತು. ಈ ಸಿಟ್ಟಿನಿಂದ ತಮ್ಮ ಮೇಲೆ ಅನಗತ್ಯವಾಗಿ ನಿಂಬಾಳಕರ್ ಆರೋಪ ಮಾಡಿದ್ದಾರೆ. ಸೇಫ್ ಸಿಟಿ ಯೋಜನೆಯಲ್ಲಿ ನಿಂಬಾಳಕರ್ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಲು ಹೊರಟಿದ್ದರು ಎಂದು ರೂಪಾ ನೇರವಾಗಿಯೇ ಆರೋಪಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...