LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಟ್ಯೂಶನ್,ಕೋಚಿಂಗ್ ಕೇಂದ್ರ ಕ್ಲೋಸ್ – ಬಂದ್ ಮಾಡುವಂತೆ ಸೂಚನೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು -

ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶಾಲೆಗಳನ್ನು ಮುಚ್ಚುವಂತೆ ಸೂಚಿಸಿರುವ ಸರ್ಕಾರ ಇದೀಗ ಕೋಚಿಂಗ್ ಸೆಂಟರ್‌ ಗಳನ್ನು ಮುಚ್ಚಿಸಲು ನಿರ್ಧರಿಸಿದೆ.ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲ ರೀತಿಯ ತರಬೇತಿ ಕೇಂದ್ರಗಳನ್ನು ಮುಚ್ಚಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ಶಾಲೆಗಳನ್ನು ಮುಚ್ಚಿದರೆ,ಟ್ಯೂಷನ್ ಹಾಗೂ ತರಬೇತಿ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹೋಗುತ್ತಾರೆ.ಇಲ್ಲಿ ವಿದ್ಯಾರ್ಥಿಗಳನ್ನು ನಿಯಂತ್ರಿಸುವುದು ಯಾರು? ಎಂದು ಖಾಸಗಿ ಶಾಲೆಗಳು ಶಿಕ್ಷಣ ಇಲಾಖೆಯನ್ನು ಪ್ರಶ್ನಿಸಿದ್ದವು.

ಈ ಹಿನ್ನೆಲೆಯಲ್ಲಿ ಶಾಲೆಗಳ ಜತೆಗೆ ಜ.19ರವರೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ 10ನೇ ತರಗತಿವರೆಗೆ ಎಲ್ಲ ರೀತಿಯ ಟ್ಯೂಷನ್ ಹಾಗೂ ತರಬೇತಿ ಕೇಂದ್ರಗಳನ್ನು ಮುಚ್ಚಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.ಅಲ್ಲದೆ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರುವುದರಿಂದ ಈ ಅವಧಿ ಯಲ್ಲಿನ ರಾಜ್ಯಾದ್ಯಂತ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳನ್ನು ನಡೆಸದಂತೆ ಸೂಕ್ತ ಕ್ರಮವಹಿ ಸಲು ಸೂಚನೆ ನೀಡಿದೆ.ರಾಜ್ಯದಲ್ಲಿರುವ ಟ್ಯೂಷನ್ ಕೇಂದ್ರಗಳು ಯಾವ ಇಲಾಖೆಯ ವ್ಯಾಪ್ತಿಗೂ ಬಾರದೇ ಇರುವುದರಿಂದ ಇವುಗಳ ನಿಯಂತ್ರಣ ಮಾಡುವುದು ಶಿಕ್ಷಣ ಇಲಾಖೆಗೆ ಕಷ್ಟವಾಗಿತ್ತು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಈ ವಿಚಾರವಾಗಿ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದ ಹಿನ್ನೆಲೆ ಯಲ್ಲಿ ಇದೀಗ ಶಿಕ್ಷಣ ಇಲಾಖೆಯು ಟ್ಯೂಷನ್ ಕೇಂದ್ರಗ ಳನ್ನು ಸಹ ಮುಚ್ಚಿಸಬೇಕೆಂದು ಆದೇಶಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...