ಕುಂದಗೋಳ -
ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣ ದಲ್ಲಿ ನಡೆದಿದೆ ಹೌದು ಅತಿಥಿ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಅಧಿಕಾರಿಗಳ ತಾರತಮ್ಯ ಧೋರಣೆ ಖಂಡಿಸಿ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಕೊಪ್ಪದ ಮಾತನಾಡಿ ಎಲ್‌ಕೆಜಿ, ಯುಕೆಜಿ ಮಕ್ಕಳ ಮಾಹಿತಿ ಯನ್ನು ತಂತ್ರಾಂಶದಲ್ಲಿ ದಾಖಲಿಸಲು ಸೂಚಿಸಲಾಗಿದೆ ಆದರೆ ಶಾಲೆಯ ಯು-ಡೈಸ್‌ನಲ್ಲಿ ಸಮನ್ವಯ ಶಿಕ್ಷಣದ ವಿಭಾಗ ಇನ್ನೂ ತೆರೆದಿಲ್ಲ ಇಬ್ಬರು ಶಿಕ್ಷಕಿಯರ ಮೇಲೆ ದೂರುಗಳಿದ್ದರೂ, ಶಿಕ್ಷಣ ಇಲಾಖೆ ಕೇವಲ ಮುಖ್ಯ ಶಿಕ್ಷಕರ ಮೇಲೆ ಮಾತ್ರ ಕ್ರಮ ಕೈಗೊಂಡಿದೆ.
ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ತಕ್ಷಣ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು' ಎಂದು ಆಗ್ರಹಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಮಾದೇವಿ ಮಾಡಲಗೇರಿ ಅವರು ಪ್ರತಿಭಟನನಿರತರ ಜೊತೆ ಚರ್ಚಿಸಿ ಮೂರು ದಿನ ದೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರುನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಸುದ್ದಿ ಸಂತೆ ನ್ಯೂಸ್ ಕುಂದಗೋಳ.....