LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬೇಕೆ ಬೇಕು ಟೀಚರ್ ಬೇಕು - ಶಾಲಾ ಆರಂಭದ ದಿನವೇ ಸರ್ಕಾರಿ ಶಾಲೆಯ ಮುಂದೆ ಬುಗಿಲೆದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ಆಕ್ರೋಶ.....

ರಾಯಚೂರು -

ರಾಜ್ಯದಲ್ಲಿ ಇಂದು ಮತ್ತೊಂದು ಹಂತದಲ್ಲಿ ಶಾಲೆಗಳು ಆರಂಭವಾಗಿದ್ದು ರಾಜ್ಯದ ತುಂಬೆಲ್ಲಾ ಸಡಗರ ಸಂಭ್ರಮ ದಿಂದ ವಿದ್ಯಾರ್ಥಿಗಳನ್ನು ವಿಶೇಷವಾಗಿ ಬರಮಾಡಿಕೊಂಡು ಶಾಲೆಗಳಲ್ಲಿ ಮಕ್ಕಳ ಕಲರವ ಕಂಡು ಬರುತ್ತಿದ್ದರೆ ಇನ್ನೂ ಇತ್ತ ಶಾಲಾ ಆರಂಭ ದಿನವೇ ಶಿಕ್ಷಕರಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಮಾಡುತ್ತಿದ್ದಾರೆ.

ಹೌದು ರಾಯಚೂರಿನಲ್ಲಿ ಈ ಒಂದು ಚಿತ್ರಣ ಕಂಡು ಬಂದಿತು.ಶಾಲೆಗೆ ಶಿಕ್ಷಕರನ್ನು ನೀಡುವಂತೆ ವಿದ್ಯಾರ್ಥಿಗಳು ಶಾಲೆಯ ಮುಂದೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.

ರಾಯಚೂರಿನ ಪೊತಗಲ್ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಡೀ ಶಾಲೆಗೆ ಒಬ್ಬರೇ ಶಿಕ್ಷಕರಿದ್ದಾರಂತೆ ಹೀಗಾಗಿ ಈ ಕುರಿತಂತೆ ಗ್ರಾಮ ಸ್ಥರು ಇಲಾಖೆಗೆ ಅಧಿಕಾರಿ ಗಳಿಗೆ ಗಮನಕ್ಕೆ ತಗೆದುಕೊಂಡು ಬಂದರೂ ಕೂಡಾ ಈವರೆಗೆ ಮಾತ್ರ ಸಮಸ್ಯೆಯನ್ನು ಪರಿಹಾರ ಮಾಡಿಲ್ಲ ಹೀಗಾಗಿ ಆಕ್ರೋಶಗೊಂಡ ಪೋಷಕರು ಮಕ್ಕಳೊಂದಿಗೆ ಪ್ರತಿಭಟನೆ ಮಾಡುತ್ತಿದ್ದಾರೆ.

https://youtu.be/kKjs9SV2_bk

ಒಬ್ಬ ಶಿಕ್ಷಕಿಯಿದ್ದು ಅವರನ್ನ ಕೂಡ ಬೇರೆಡೆಗೆ ಎರವಲು ಸೇವೆಗೆ ಕಳುಹಿಸಲಾಗಿದೆ ಶಿಕ್ಷಕರಿಗಾಗಿ 49 ವಿದ್ಯಾರ್ಥಿಗಳು ಧರಣಿಯನ್ನು ಮಾಡುತ್ತಿದ್ದಾರೆ.ಕೂಡಲೇ ಎರವಲು ಹೋಗಿ ರುವ ಶಿಕ್ಷಕಿಯನ್ನ ಮರಳಿ ಪೊತಗಲ್ ಶಾಲೆಗೆ ನಿಯೋಜನೆ ಮಾಡುವಂತೆ ಪಟ್ಟು ಹಿಡಿದ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ.

ಮಕ್ಕಳೊಂದಿಗೆ ಅವರ ಪೋಷಕರು ಗ್ರಾಮಸ್ಥರು ಕೂಡಾ ಸಾಥ್ ನೀಡಿದ್ದಾರೆ.ಹೀಗಾಗಿ ಶಾಲಾ ಆರಂಭದ ದಿನವೇ ಶಾಲೆಯಲ್ಲಿ ಪುಸ್ತಕವನ್ನು ಹಿಡಿದು ಕಲಿಯಬೇಕಾದ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಬೀದಿಗಿಳಿದಿದ್ದು ದುರಂತದ ವಿಚಾರವಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....