ತುಮಕೂರು -
ತುಮಕೂರಿನ ಸರ್ಕಾರಿ ಶಾಲೆ ಯೊಂದರಲ್ಲಿ ನಡೆದ ಸ್ಪೋಟ ಪ್ರಕರಣ ದಲ್ಲಿ ಒರ್ವ ಮಹಿಳೆ ಸಾವಿಗೀಡಾದ ಘಟನೆ ತುಮಕೂರಿನಲ್ಲಿ ನಡೆದಿದ ಶಾಲೆಯಲ್ಲಿ ಸ್ಫೋಟ ಪ್ರಕರಣ ಚಿಕಿತ್ಸೆ ಫಲಿಸದೆ ಅಡುಗೆ ಸಹಾಯಕಿ ಸಾವು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ದಾಸೋಹ ಕೊಠಡಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸೆಪ್ಟೆಂಬರ್ 24 ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಕಂದಿಕೆರೆ ನಿವಾಸಿ ಲತಾಮಣಿ (30) ಮೃತಪಟ್ಟ ದುರ್ದೈವಿ. ಕಳೆದ ಸೆಪ್ಟೆಂಬರ್ 24 ರಂದು ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಊಟ ತಯಾರಿಸು ವಾಗ ಅಡುಗೆ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರನೆ ಸ್ಫೋಟಗೊಂಡಿತ್ತು.
ಆ ಸಮಯದಲ್ಲಿ ಕೆಲಸ ಮಾಡುತ್ತಿದ್ದ ಲತಾಮಣಿ ಅವರ ದೇಹ ಸಂಪೂರ್ಣವಾಗಿ ಸುಟ್ಟುಹೋಗಿತ್ತು. ಕೂಡಲೇ ಅವರನ್ನು ಸ್ಥಳೀಯ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸ ಲಾಯಿತು.ಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ, ಅಲ್ಲಿನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಗಾಯಗಳ ತೀವ್ರತೆಯಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಘಟನೆಗೆ ಸಂಬಂಧಿ ಸಿದಂತೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂತೆ ನ್ಯೂಸ್ ತುಮಕೂರು.....