LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ಉಗ್ಗಿನಕೇರಿ ಸರ್ಕಾರಿ ಪ್ರೌಢ ಶಾಲೆ ಗೆ ಜಿಲ್ಲಾ ಪಂಚಾಯತ CEO ಭೇಟಿ - ಪರಿಶೀಲನೆ.....

ಧಾರವಾಡ -

ಧಾರವಾಡದ ಉಗ್ಗಿನಕೇರಿ ಸರಕಾರಿ ಪ್ರೌಢಶಾಲೆಗೆ ಧಾರವಾಡ ಜಿಲ್ಲಾ ಪಂಚಾಯತ CEO ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ತರಗತಿಗಳ ಪರಿಶೀಲನೆ ನಡೆಸಿದರು

ಹೌದು ಧಾರವಾಡ ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಇಂದು ಬೆಳಿಗ್ಗೆ ಕಲಘಟಗಿ ತಾಲೂಕಿನ ಉಗ್ಗಿನಕೇರಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ತರಗತಿಗಳ ಪರಿಶೀಲನೆ ಮಾಡಿದರು.

ವಿವಿಧ ತರಗತಿಗಳಿಗೆ ತೆರಳಿ, ವಿದ್ಯಾರ್ಥಿಗಳೊಂದಿಗೆ ಪಾಠ,ಪಠ್ಯಕ್ರಮ, ಬೋಧನೆ ಕುರಿತು ಮಾಹಿತಿ ಪಡೆದರು.ಬಸ್‍ಗಳ ಕೊರತೆಯಿಂದ ಶಾಲೆಗೆ ಬರುವುದು ಮತ್ತು ಮರಳಿ ಹೊಗುವುದು ಕಷ್ಟವಾ ಗುತ್ತಿದೆ.ಹೆಚ್ಚಿನ ಬಸ್ ಸೌಕರ್ಯ ಕಲ್ಪಸಲು ವಿದ್ಯಾರ್ಥಿಗಳು ಸಿಇಓ ಅವರಿಗೆ ವಿನಂತಿಸಿದರು.

ಶಾಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆ ಬಗ್ಗೆ ಹೆಚ್ಚು ಒತ್ತು ಕೊಡಲು ಮತ್ತು ಪ್ರತಿದಿನ ಶಾಲಾ ಆವರಣ,ಆಟದ ಮೈದಾನ ಮತ್ತು ಶೌಚಾಲಯಗಳ ಸ್ವಚ್ಚತೆಗೆ ಗಮನಹರಿಸುವಂತೆ ಶಿಕ್ಷಕರಿಗೆ ಅವರು ಸೂಚಿಸಿದರು.ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಬೇಕೆಂದು ಮತ್ತು ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಸ್ಪರ್ಧಾತ್ಮಕ ಮನೋಭಾವ ಬೆಳೆಯುವಂತೆ ಪ್ರೋತ್ಸಾಹಿಸಬೇಕೆಂದು ಡಾ. ಬಿ. ಸುಶೀಲಾ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಲಘಟಗಿ ಕ್ಷೇತ್ರಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ,ಉಗ್ಗಿನಕೇರಿ ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಚಂದ್ರಶೇಖರ ಅಳಗವಾಡಿ, ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...