ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ

Suddi Sante Desk

ಬೆಂಗಳೂರು – ಕೊರೊನಾ ಮಹಾಮಾರಿಯ ಹೊಸ ರೂಪಾಂತರ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯ ಹಿತ ದೃಷ್ಠಿಯಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಆದೇಶ ಹೋರಡಿಸಿದ್ದಾರೆ. ಇಂದಿನಿಂದ ಜನೆವರಿ 2 ರ ವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲ್ಲಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದರು.

ಈ ಕುರಿತು ಇಂದು ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹೊಸ ಪ್ರಬೇದ ಹಾಗೂ ಕೊವೀಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ರಾಜ್ಯಾದ್ಯಂತ ಡಿಸೆಂಬರ್ 23ರಿಂದ, ಅಂದರೆ ಇಂದಿನಿಂದ ಜನೆವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ ಮಾಡಲಾಗಿದೆ.

ಇನ್ನೂ ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್ ಟಿ-ಪಿಸಿಆರ್ ವಿಧಾನದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.