ಬೆಂಗಳೂರು –
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸು ತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ಇನ್ನೂ ಬೆಂಗಳೂರು ನಗರ, ಮೈಸೂರು, ಉಡುಪಿ, ಮಣಿಪಾಲ್, ಮಂಗಳೂರು, ಬೀದರ್, ಕಲಬುರಗಿ ಹಾಗೂ ತುಮಕೂರಿನಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆ ಯಲ್ಲಿ ಹೆಚ್ಚಳವಾಗುತ್ತಿದೆ.

ಹೀಗಾಗಿ ಈ 8 ನಗರಗಳಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಇದು ಜಾರಿಯಲ್ಲಿರಲಿದೆ. ಏಪ್ರಿಲ್ 20ರ ವರೆಗೆ ನೈಟ್ ಕರ್ಫ್ಯೂ ಮುಂದುವರಿ ಯಲಿದ್ದು, ಒಂದೊಮ್ಮೆ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಇದು ಮತ್ತಷ್ಟು ದಿನ ಮುಂದುವರಿಸುವ ಚಿಂತನೆಯಲ್ಲಿ ಸರ್ಕಾರವಿದೆ.
ನೈಟ್ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳು ಸ್ತಬ್ಧವಾಗಲಿದ್ದು, ಬಸ್, ರೈಲು, ವಿಮಾನ ಸಂಚಾರ ಎಂದಿನಂತೆ ಇರುವ ಕಾರಣ ಪ್ರಯಾಣಿಕರಿಗೆ ಅನುಕೂಲವಾಗುವ ಸಲುವಾಗಿ ಕ್ಯಾಬ್, ಓಲಾ, ಉಬರ್ ಗಳಿಗೆ ಅವಕಾಶ ಕಲ್ಪಿಸಲಾಗಿದೆ.