ಬೆಂಗಳೂರು –
ಮಾಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ದಲ್ಲಿ ಇನ್ನೂ ಆರು ತಿಂಗಳ ಯಾವುದೇ ರೀತಿಯ ನಡೆಯಬೇಕಿದ್ದಂತ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳ ಚುನಾವ ಣೆಯನ್ನು ಮಾಡದಂತೆ ಅವುಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಹೌದು ಕರೋನ ಕಾಟದಿಂದಾಗಿ ರಾಜ್ಯ ಸರ್ಕಾರ ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್ ಪ್ರಸಾದ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಉಪ ವಿಭಾಗಾಧಿ ಕಾರಿಗಳು,ತಹಶೀಲ್ದಾರರಿಗೆ,ಯೋಜನಾ ನಿರ್ದೇಶಕ ರಿಗೆ ಪತ್ರ ಬರೆದಿದ್ದಾರೆ.ರಾಜ್ಯಾಧ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ಆರೋ ಗ್ಯದ ಹಿತದೃಷ್ಠಿಯಿಂದ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಸುವುದು ಬಾಕಿ ಇದ್ದಲ್ಲಿ ಚುನಾವಣೆಯನ್ನು ಕೂಡಲೇ ಮುಂದೂಡುವಂತೆ ನಿರ್ದೇಶನ ನೀಡಲಾಗಿದೆ.

ಸಚಿವ ಸಂಪುಟ ನಿರ್ಣಯದ ಹಿನ್ನಲೆಯಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳು ಹಾಗೂ ಮಹಾನಗರ ಪಾಲಿಕೆಗಳು) ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಸದರಿ ಸಂಸ್ಥೆಗಳ ಅಧ್ಯಕ್ಷರು,ಉಪಾಧ್ಯಕ್ಷರು ಚುನಾವಣೆಗಳನ್ನು ಸಹ ದಿನಾಂಕ 26-04-2021ರಿಂದ ಮುಂದಿನ 6 ತಿಂಗಳ ಅವಧಿಗೆ ಮುಂದೂಡುವ ಬಗ್ಗೆ ಸಚಿವ ಸಂಪುಟವು ತೀರ್ಮಾನಿಸಿದ್ದು ಅದರಂತೆ ಅಗತ್ಯ ಕ್ರಮ ಕೈಗೊಳ್ಳು ವಂತೆ ನಿರ್ದೇಶಿಸಿದ್ದಾರೆ.