ಧಾರವಾಡ –
ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕ ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡದಿರಿ ಎಂದು ಧಾರವಾಡ ಜಂಟಿ ಕೃಷಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು ಸೂಚಿಸಿದ್ದಾರೆ. ನಗರದ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಬೀಜ, ರಸಗೊಬ್ಬ ರ ಹಾಗೂ ಕೀಟನಾಶಕಗಳ ದಾಸ್ತಾನು ಪರಿಶೀಲಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು ಸೂಚಿಸಿದರು.

ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿ ದ್ದು ಕಂಡುಬಂದಲ್ಲಿ ಅಂತಹ ಮಳಿಗೆಗಳ ಪರವಾನಿ ಗೆ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು. ಕಡ್ಡಾಯವಾಗಿ ಮಳಿಗೆಗಳಲ್ಲಿ ಕೃಷಿ ಪರಿಕರಗಳ ದರ ಪಟ್ಟಿಯನ್ನು ಪ್ರದರ್ಶಿಸಬೇಕು ಎಂದು ಸೂಚಿಸಿದರು

ಮುಂಗಾರು ಬಿತ್ತನೆ ಕಾರ್ಯ ಆರಂಭವಾಗಿದ್ದು ರೈತ ರ ಅಗತ್ಯಕ್ಕೆ ತಕ್ಕಂತೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳ ದಾಸ್ತಾನನ್ನು ಸಂಗ್ರಹ ಮಾಡಲು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು ರೈತ ರು ಕೃಷಿ ಪರಿಕರಗಳನ್ನು ಖರೀದಿಸುವ ಸಂದರ್ಭ ದಲ್ಲಿ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿ ದರು.