ಬೆಂಗಳೂರು –
ರಾಜ್ಯದ 5 ಮತ್ತು 8 ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಯನ್ನು ಕ್ಲಸ್ಟರ್ ಮಟ್ಟದಲ್ಲಿ ಮಾಡಲು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ ಹೌದು ಹತ್ತು ಹಲವಾರು ಗೊಂದಲಗಳ ನಡುವೆ ಈ ಒಂದು ಮಹತ್ವದ ನಿರ್ಧಾರವನ್ನು ತಗೆದುಕೊಳ್ಳ ಲಾಗಿದೆ.
ರಾಜ್ಯ ಪಠ್ಯಕ್ರಮ ಬೋಧಿಸುವ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ವನ್ನು ಕ್ಲಸ್ಟರ್ ಮಟ್ಟದಲ್ಲಿ ನಿರ್ವಹಿಸುವುದಾಗಿ ತೀರ್ಮಾನಿಸಲಾಗಿದೆ.
ಒಂದು ಬ್ಲಾಕ್ನಿಂದ ಮತ್ತೂಂದು ಬ್ಲಾಕ್ಗೆ ಪ್ರಶ್ನೆಪತ್ರಿಕೆಗಳ ಸಾಗಾಟ ಮಾಡಿ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಲು ಸಮಯ ಸಾಲದು ಆದ್ದರಿಂದ ಅಂತರ್ ಕ್ಲಸ್ಟರ್ ವಾರು ನಿರ್ವಹಿಸುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಸೂಚಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..